Header Ads
Breaking News

ರಾಜ್ಯದೆಲ್ಲೆಡೆ ಕೊರೋನಾ ವೈರಸ್ ಭೀತಿ ಹಿನ್ನೆಲೆ; ಮಂಗಳೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಔಷಧ ಸಿಂಪಡಣೆ

ರಾಜ್ಯದೆಲ್ಲೆಡೆ ಕೊರೋನಾ ವೈರಸ್ ಭೀತಿ ಆವರಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಬಸ್‍ಗಳಿಗೆ ಔಷಧ ಸಿಂಪಡಣೆ ಮಾಡಲಾಯಿತು. ಮಂಗಳೂರಿನ ಕೆಎಸ್‍ಆರ್‍ಟಿಸಿ ಘಟಕ 1ರಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಆ್ಯಂಟಿ ಬಯೋಟೆಕ್ ಔಷಧ ಸಿಂಪಡಣೆ ಮಾಡಲಾಯಿತು. ಮಂಗಳೂರಿಗೆ ಬೇರೆ ಊರುಗಳಿಂದ ಪ್ರಯಾಣಿಕರು ಆಗಮಿಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಕ್ರಮಗಳನ್ನು ಕೈಗೊಂಡಿದೆ. ಮಾತ್ರವಲ್ಲದೆ ಸಾರ್ವಜನಿಕರಿಗೆ ಜನಜಾಗೃತಿಯನ್ನು ಮೂಡಿಸಲಾಗುತ್ತಿದೆ.

Related posts

Leave a Reply

Your email address will not be published. Required fields are marked *