Header Ads
Breaking News

ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳ ಜೊತೆಗೆ ಸಿಎಂ ವಿಡಿಯೋ ಕಾನ್ಪರೆನ್ಸ್

ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಗಳಲ್ಲಿ ಲಾಕ್ ಡೌನ್ ಹೇರಿಕೆ ಮಾಡುವ ನಿರ್ಧಾರವನ್ನು ಆಯಾಯ ಜಿಲ್ಲಾಡಳಿತ ತೆಗೆದುಕೊಳ್ಳಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಪರೆನ್ಸ್ ನಡೆಸುತ್ತಿದ್ದಾರೆ. ವಿಡಿಯೋ ಕಾನ್ಪರೆನ್ಸ್‍ನಲ್ಲಿ ಆಯಾಯ ಜಿಲ್ಲಾಧಿಕಾರಿಗಳಿಂದ ಕೊರೊನಾ ಸೋಂಕಿತರ ಸಂಖ್ಯೆ, ಮರಣ ಹೊಂದಿದವರ ಪ್ರಮಾಣ. ಜಿಲ್ಲೆಯಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿಯನ್ನು ಪಡೆಯುತ್ತಿದ್ದಾರೆ. ಸಭೆಯಲ್ಲಿ ಆಯಾಯ ಜಿಲ್ಲೆಗಳಲ್ಲಿ ಲಾಕ್ ಡೌನ್ ಹೇರಿಕೆಯ ಕುರಿತು ಜಿಲ್ಲಾಡಳಿತಗಳೇ ನಿರ್ಧಾರವನ್ನು ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

Related posts

Leave a Reply

Your email address will not be published. Required fields are marked *