Header Ads
Header Ads
Breaking News

ರಾಜ್ಯದ ಕರಾವಳಿ ಭಾಗದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಹೆಚ್ಚಿನ ಪ್ರವಾಹದಿಂದ ಉತ್ತರ ಕರ್ನಾಟಕ ಭಾಗಗಳಲ್ಲಿ ಸಂತ್ರಸ್ತರಿಗೆ ಅನೇಕ ಸಮಸ್ಯೆಗಳು ಎದುರಾಗಿವೆ. ಈ ಘಟನೆ ಮರೆಮಾಚುವ ಬೆನ್ನಲ್ಲೇ, ಕರಾವಳಿ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ವರದಿಯಾಗಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಇನ್ನು ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಆಂತರಿಕ ಕರ್ನಾಟಕದ ಘಾಟ್ ಸೆಕ್ಷನ್ ರಸ್ತೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Related posts

Leave a Reply

Your email address will not be published. Required fields are marked *