Header Ads
Breaking News

ರಾಜ್ಯಾದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಇಂದಿನಿಂದ ಮಾರ್ಚ್ 23ರ ವರೆಗೆ ನಡೆಯಲಿದ್ದು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 34,346 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ರೆಗ್ಯುಲರ್ 30,897 ರಿಪೀಟರ್, 1,264 ಹಾಗೂ ಖಾಸಗಿ ವಿದ್ಯಾರ್ಥಿಗಳು 2185 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಅದರಲ್ಲಿ ಬಾಲಕರು 17,137 ಮತ್ತು ಬಾಲಕಿಯರು 17,209 ಮಂದಿ ಪರೀಕ್ಷೆಯನ್ನು ಎದುರಿಸಲಿದ್ದಾರೆ. ಜಿಲ್ಲೆಯ 51 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕಲಾ ವಿಭಾಗದಲ್ಲಿ 4,532, ವಾಣಿಜ್ಯ 16,237 ಹಾಗೂ ವಿಜ್ಞಾನ ವಿಭಾಗದಲ್ಲಿ 13,577 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ವೇಳೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಸಿಸಿಟಿವಿ ಅಳವಡಿಸಲಾಗಿದೆ. ಮಂಗಳೂರು ಬಲ್ಮಠ ಪದವಿಪೂರ್ವ ಕಾಲೇಜಿನಲ್ಲೂ ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ. ಇದರ ಜೊತೆಗೆ ಪೊಲೀಸರು ಕೂಡ ಹೆಚ್ಚಿನ ಭದ್ರತೆಯನ್ನು ಒದಗಿಸಿದ್ದಾರೆ. ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದ್ದು, ಸೆಂಟರ್ ಕಸ್ಟೋಡಿಯನ್‍ಗೆ ಮಾತ್ರ ಬೇಸಿಕ್ ಪೊನ್‍ ಅಥವಾ ಲ್ಯಾಂಡ್ ಲೈನ್‍ನ್ನು ಮಾತ್ರ ಬಳಸುವ ಅವಕಾಶ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

Related posts

Leave a Reply

Your email address will not be published. Required fields are marked *