Header Ads
Header Ads
Breaking News

ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ನಳಿನ್ ಕುಮಾರ್

ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾದ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಪದಗ್ರಹಣ ಸಮಾರಂಭ ನೆರವೇರಿತು. ಮಲ್ಲೇಶ್ವರದಲ್ಲಿನ ಭಾರತೀಯ ಜನತಾ ಪಕ್ಷ ಪ್ರಧಾನ ಕಛೇರಿಯಲ್ಲಿ ಅಧ್ಯಕ್ಷ ಪದವಿ ಸ್ವೀಕಾರ ಕಾರ್ಯಕ್ರಮ ನಡೆಯಿತು.

ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲ್ ಪದಗ್ರಹಣ ಮಾಡಿದರು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನೂತನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರ ನಡೆಯಿತು. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಇತರ ಸಚಿವರು, ಹಲವು ಶಾಸಕರು, ಸಂಸದರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

Leave a Reply

Your email address will not be published. Required fields are marked *