Header Ads
Header Ads
Header Ads
Header Ads
Header Ads
Header Ads
Breaking News

ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಜಂಕ್ಷನ್‌ನ ಮೇಲ್ಸೇತುವೆ ಬಿರುಕು

ರಾಷ್ಟ್ರೀಯ ಹೆದ್ದಾರಿ66ರ ತೊಕ್ಕೊಟ್ಟು ಜಂಕ್ಷನ್ನ ಮೇಲ್ಸೇತುವೆ ಎರಡು ದಿನಗಳ ಹಿಂದೆ ಬಿರುಕು ಕಂಡಿದ್ದು, ಬಿರುಕುಗೊಂಡ ಸೇತುವೆಯ ದುರಸ್ತಿ ಕಾರ್ಯ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ನವಯುಗ್ ಸಂಸ್ಥೆಯ ಇಂಜಿನಿಯರ್‌ಗಳ ಮಾರ್ಗದರ್ಶನದಲ್ಲಿ ರವಿವಾರ ನಡೆಯಿತು. ಕಳೆದೆರಡು ದಿನಗಳಿಂದ ಸುರಿದ ಮಳೆಯ ಸಂದರ್ಭದಲ್ಲಿ ತೊಕ್ಕೊಟ್ಟಿನಿಂದ ಮಂಗಳೂರು ಕಡೆ ಸಂಚರಿಸುವ ಭಾಗದಲ್ಲಿ ಮೇಲ್ಸೇತುವೆಯ ಕಾಂಕ್ರಿಟ್ ಸ್ಲ್ಯಾಬ್ ಸಂಪರ್ಕಿಸುವ ಬ್ಲಾಕ್‌ನಲ್ಲಿ ಉಬ್ಬು ರೀತಿಯಲ್ಲಿ ಕಂಡುಬಂದಿದ್ದು, ಸ್ಥಳೀಯ ವ್ಯಾಪಾರಿಯೊಬ್ಬರು ಟ್ರಾಫಿಕ್ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸಂಬಂಧಿತ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಸಂದರ್ಭದಲ್ಲಿ ಕೆಲ ಕಾಲ ಮೇಲ್ಸೇತುವೆಯ ಒಂದು ಭಾಗದಲ್ಲಿ ಸಂಚಾರವನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ಬಳಿಕ ಸಂಚಾರ ಮುಕ್ತಗೊಳಿಸಿದ್ದು, ರವಿವಾರ ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ದುರಸ್ತಿ ಕಾರ್ಯವನ್ನು ನಡೆಸಿದರು. ಮುಖ್ಯವಾಗಿ ಮೇಲ್ಸೇತುವೆಯ ಕೆಳಗಿನ ಭಾಗದಲ್ಲಿ ಸಂಚರಿಸುವ ವಾಹನಗಳ ಮೇಲೆ ಕಾಂಕ್ರಿಟ್ ಬ್ಲಾಕ್ ಬೀಳುವ ಸಾಧ್ಯತೆಯ ಹಿನ್ನಲೆಯಲ್ಲಿ ಟ್ರಾಫಿಕ್ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರು. ಈ ವಿಚಾರದಲ್ಲಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡದಿದ್ದರೂ ಮೇಲ್ಸೇತುವೆಯಲ್ಲಿ ಯಾವುದೇ ಅಪಾಯವಿಲ್ಲ ಎಂದು ಹೆಸರು ಹೇಳಲು ಇಚ್ಚಿಸದ ಅಧಿಕಾರಿಯೊಬ್ಬರು ತಿಳಿಸಿದರು.

Related posts

Leave a Reply

Your email address will not be published. Required fields are marked *