Header Ads
Header Ads
Header Ads
Header Ads
Header Ads
Header Ads
Breaking News

ರಾಷ್ಟ್ರೀಯ ಹೆದ್ದಾರಿ 75ರ ಅಸಮರ್ಪಕ ಕಾಮಗಾರಿ ಹಿನ್ನೆಲೆ : ನೆಲ್ಯಾಡಿಯಲ್ಲಿ ನಡೆದ ಬೃಹತ್ ಪ್ರತಿಭಟನೆ

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಸಮರ್ಪಕ ಕಾಮಗಾರಿ ಹಿನ್ನೆಲೆಯಲ್ಲಿ ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯಿಂದ ರಸ್ತೆ ತಡೆ ಹಾಗೂ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಪ್ರತಿಭಟನೆಯಲ್ಲಿ 23ಕ್ಕೂ ಹೆಚ್ಚಿನ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು, ಚರ್ಚ್, ಮಸೀದಿ, ದೇವಸ್ಥಾನಗಳಿಂದಲೂ ಬೆಂಬಲ ನೀಡಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನೆಗೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಪ್ರಮುಖರು ಕೂಡಲೇ ರಸ್ತೆ ಕಾಮಗಾರಿ ಆರಂಭಿಸಬೇಕು ಇಲ್ಲದೇ ಹೋದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಭವಿಸುವ ಪ್ರತಿಯೊಂದು ದುರಂತಗಳಿಗೂ ಹೊಣೆ ಹೆದ್ದಾರಿ ಪ್ರಾಧಿಕಾರವೇ ಆಗಿರುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಲಾಯಿತ್ತು. ಪ್ರತಿಭಟನೆ ನಡೆಯುವ ಸ್ಧಳದಲ್ಲಿ ಬಿಗಿ ಪೋಲಿಸ್ ಭದ್ರತೆ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಧಳಕಾಗಮಿಸಿ ಮನವಿ ಸ್ವೀಕರಿಸಿ ಕೂಡಲೇ ಎರಡು ತಿಂಗಳುಗಳ ಒಳಗಡೆ ರಸ್ತೆ ಸರಿಪಡಿಸುವ ಭರವಸೆ ನೀಡಿದ ನಂತರ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಉಪ್ಪಿನಂಗಡಿ ಪೋಲೀಸರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸುವ ಭರವಸೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಕಾರ್ಯಕ್ರಮ ನಡೆಸಲಿಲ್ಲ. ಉಪ್ಪಿನಂಗಡಿ, ಪುತ್ತೂರು, ನೆಲ್ಯಾಡಿ, ಬೆಳ್ಳಾರೆ, ಸಂಪ್ಯ ಪೋಲೀಸರಿಂದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.

Related posts

Leave a Reply

Your email address will not be published. Required fields are marked *