Header Ads
Header Ads
Breaking News

ರಾ.ಹೆದ್ದಾರಿ ರಸ್ತೆ ನಿರ್ಮಾಣಕ್ಕೆ ಕಟ್ಟುನಿಟ್ಟಿನ ಕಾಯ್ದೆ ಜಾರಿಗೆ ತರುವಂತೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

ಮೂಡುಬಿದಿರೆ: ಕೇಂದ್ರ ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ರದ್ದುಗೊಳಿಸಿ, ರಾಷ್ಟೀಯ ಮತ್ತು ರಾಜ್ಯ ಹೆದ್ದಾರಿ ರಸ್ತೆ ನಿರ್ಮಾಣ ಮತ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಕಾಯ್ದೆ ಜಾರಿಗೆ ತರುವಂತೆ  ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇಲ್ಲಿನ ತಾಲೂಕು ಕಛೇರಿ ಎದುರು ಪ್ರತಿಭಟನೆ ನಡೆಯಿತು. ಎಸ್.ಡಿ.ಪಿ.ಐಜಿಲ್ಲಾ ಸಮಿತಿಯ ಸದಸ್ಯ ಆನಂದ ಮಿತ್ತಬೈಲು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಈ ದೇಶದ ಆಡಳಿತದ ಚುಕ್ಕಾಣಿ ಹಿಡಿದ ರಾಜಕೀಯ ಮುತ್ಸದ್ಧಿಗಳನ್ನು ವೈಚಾರಿಕ ನಿಲುವು ಹಾಗೂ ಪ್ರಜಾಪ್ರಭುತ್ವ ಚಿಂತನೆಯ ನಾಯಕರೆಂದು ಹೇಳಲು ಸಾಧ್ಯವಿಲ್ಲ. ವಿಕೃತಿಯಿಂದ ಸಂತೋಷ ಪಡುತ್ತಿರುವ ಈ ನಾಯಕರ ಆಡಳಿತ ಅನಾಚಾರಯುತವಾದದ್ದು ಎಂದು ಆರೋಪಿಸಿದರು. ಪ್ರತಿಭಟನೆಯ ಬಳಿಕ ತಮ್ಮ ಮನವಿಯನ್ನು ಮೂಡುಬಿದಿರೆ ತಹಶೀಲ್ದಾರ್ ಅನಿತಾ ಲಕ್ಷ್ಮೀ ಅವರ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಟಿ.ಯು ಇದರ ಜಿಲ್ಲಾಧ್ಯಕ್ಷ ಜಾಬಿರ್ ಅರಿಯಡ್ಕ ಎಸ್.ಡಿ.ಪಿ.ಐ ಮುಲ್ಕಿ- ಮೂಡುಬಿದಿರೆ ಕ್ಷೇತ್ರದ ಅಧ್ಯಕ್ಷ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರು, ಇಮ್ರಾನ್ ಮೂಡಬಿದಿರೆ ಹಾಗೂ ಪಕ್ಷದ ಕಾರ್ಯಕರ್ತರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *