Header Ads
Breaking News

ರೋಗಿಗಳಿಗೆ ವೈದ್ಯಕೀಯ ಸೌಲಭ್ಯ ಸಿಗದೇ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ : ರಮಾನಾಥ್ ರೈ ಗಂಭೀರ ಆರೋಪ

ರಾಜ್ಯದಲ್ಲಿ ಸೇರಿದಂತೆ ಜಿಲ್ಲೆಯಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ದಿನ ದಿನದಿಂದ ಸಂಖ್ಯೆ ಹೆಚ್ಚುತ್ತಿದೆ. ಅದ್ರೆ ಜಿಲ್ಲಾಡಳಿತ ನಿರ್ಲಕ್ಷ್ಯಕ್ಕೆ ಕೊರೋನಾ ರೋಗಿಗಳಿಗೆ ವೈದ್ಯಕೀಯ ಸೌಲಭ್ಯ ಸಿಗದೇ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಮಾಜಿ ಸಚಿವ ರಮಾನಾಥ್ ರೈ ಆರೋಪಿಸಿದ್ರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊರೋನಾ ರಾಜ್ಯದಲ್ಲಿ ವಿಪರೀತವಾಗಿ ಹೆಚ್ಚಳವಾಗುತ್ತಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರದ ಕಾರ್ಯ ವೈಖರಿಯೇ ಕಾರಣವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ನಗರದಲ್ಲಿ ಡೆಡ್ಲಿ ವೈರಸ್‍ನ ಪ್ರಮಾಣ ಏರಿಕೆಯಾಗಲು ಬಿಎಸ್‍ವೈ ಸರ್ಕಾರವೇ ಕಾರಣವಾಗಿದ್ದು, ಪಕ್ಕದ ರಾಜ್ಯ ಕೇರಳದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ ಕೇವಲ 6 ಆಗಿದ್ದರೆ, ದ.ಕ. ಜಿಲ್ಲೆಯೊಂದರಲ್ಲೇ ಈಗಾಗಲೇ 31 ಜನರು ಕೊರೋನಾ ಸೋಂಕಿಗೆ ಬಲಿಯಾಗಿರುವುದಕ್ಕೆ ಸರ್ಕಾರವೇ ಹೊಣೆ ಎಂದು ಆಕ್ರೋಶವ್ಯಕ್ತ ಪಡಿಸಿದ ರೈ, ಬೆಂಗಳೂರಿನಲ್ಲಿ ಮಾಡಿದಂತೆ ನಗರದಲ್ಲೂ 1 ಸಾವಿರ ಹಾಸಿಗೆಯುಳ್ಳ ಕೊರೋನಾ ಆಸ್ಪತ್ರೆಯನ್ನು ಶೀಘ್ರವಾಗಿ ಮಾಡಬೇಕು ಎಂದರು. ಜಿಲ್ಲೆಯಲ್ಲಿ ಬಡವರಿಗೆ ನೆರವಾಗುತ್ತಿದ್ದ ವೆನ್ಲಾಕ್ ಆಸ್ಪತ್ರೆಯೀಗ..ಕೇವಲ ಕೊರೋನ ರೋಗಿಗಳಿಗೆ ಮಾತ್ರ ಸೀಮಿತವಾಗಿದ್ದು, ಮಳೆಗಾಲವಾದ್ದರಿಂದ ಡೆಂಗ್ಯೂ-ಮಲೇರಿಯಾದಿಂದ ಬಳಲುತ್ತರುವ ಬಡ ರೋಗಿಗಳಿಗೆ ಇದು ಸಂಕಷ್ಟವನ್ನು ತಂದೊಡ್ಡಿದೆ ಎಂದು ಅವರು ಹೇಳಿದ್ರು.

Related posts

Leave a Reply

Your email address will not be published. Required fields are marked *