Header Ads
Breaking News

ಲಾರಿಗಳ ನಡುವೆ ಮುಖಾಮುಖಿ ಢಿಕ್ಕಿ : ಉಳ್ಳಾಲದ ಎಕ್ಕೂರಿನಲ್ಲಿ ಅವಘಡ

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಎರಡು ಲಾರಿಗಳ ನಡುವೆ ಅಪಘಾತ ನಡೆದಿದ್ದು, ಲಾರಿ ಚಾಲಕ ಪವಾಡಸದೃಶ ರೂಪದಲ್ಲಿ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಕಾಸರಗೋಡು ಕಡೆಗೆ ಸಾಗುತ್ತಿದ್ದ ಸಿಮೆಂಟ್ ಲೋಡ್ ಇದ್ದ ಲಾರಿಗೆ, ಬೆಳಗಾವಿಯಿಂದ ಸಕ್ಕರೆ ಸಾಗಾಟ ನಡೆಸುತ್ತಿದ್ದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಎದುರುಗಡೆಯಿದ್ದ ಸಿಮೆಂಟ್ ಲಾರಿ ಹಠಾತ್ ಬ್ರೇಕ್ ಹಾಕಿದ ಪರಿಣಾಮ ನಡೆದ ಅಪಘಾತ ನಡೆದಿದೆ. ಅಪಘಾತ ನಡೆದ ಕಾರಣ ಹೆದ್ದಾರಿಯಲ್ಲಿ ಕೆಲವು ಕಾಲ ಸಂಚಾರಕ್ಕೆ ತಡೆಯಾಯಿತು. ನಂತರ ಸಂಚಾರಿ ಠಾಣಾ ಪೊಲೀಸ್ರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *