Header Ads
Header Ads
Breaking News

ಲೋಕಸಭಾ ಚುನಾವಣೆ ಹಿನ್ನೆಲೆ: ರೌಡಿಗಳಿಗೆ ಡ್ರಿಲ್ ಮಾಡಿದ ಪೊಲೀಸರು.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಂಗಳೂರಿನ ರೌಡಿಗಳಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಡ್ರಿಲ್ ಮಾಡಿದ್ದಾರೆ.. ಮಂಗಳೂರು ಕಮೀಷನೇಟರ್ ವ್ಯಾಪ್ತಿಯ ರೌಡಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು ಅಪಾರ ಪ್ರಮಾಣ ಶಸ್ತ್ರಾಸ್ತ್ರ ವಶಪಡಿಸಿಕೊಂಡಿದ್ದಾರೆ.ಟಾರ್ಗೆಟ್ ಗ್ಯಾಂಗ್ ನ ಮುಖಂಡ ಶುಮ್ರಾ ಇರ್ಮಾನ್ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಲಾಂಗ್,ಮಚ್ಚು,ತಲ್ವಾರ್ ಗಳನ್ನು ವಶಪಡಿಸಿಕೊಂಡಿದ್ದಾರೆ.ಸುರತ್ಕಲ್ ನಲ್ಲಿ ಅಪರಾಧಕ್ಕೆ ಬಳಸಿದ ಸ್ಕಾರ್ಪಿಯೋ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬಳಿಕ ಪೊಲೀಸ್ ಗ್ರೌಂಡ್ ನಲ್ಲಿ ರೌಡಿಗಳ ಪರೇಡ್ ನಡೆಸಿದ್ದಾರೆ.ವಿವಿಧ ಠಾಣಾ ವ್ಯಾಪ್ತಿಯ 200 ಕ್ಕೂ ಅಧಿಕ ರೌಡಿಗಳ ಪರೇಡ್ ನಡೆಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ಈಗಾಗಲೇ ರೌಡಿಗಳ ಹಳೇ ಫೈಲ್ ಗಳನ್ನು ಓಪನ್ ಆಗಿದ್ದು ಚುನಾವಣಾ ಸಂಧರ್ಭದಲ್ಲಿ ದುಷ್ಕೃತ್ಯ ಮೆರೆದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.ರೌಡಿಗಳಿಂದ ಮುಚ್ಚಳಿಕೆ ಬರೆಸಲಾಗಿದ್ದು,ಚುನಾವಣಾ ಅಂತ್ಯದವರೆಗೆ ಪೊಲೀಸರು ರೌಡಿಗಳ ಮೇಲೆ ಕಣ್ಣಿರಿಸಲಿದ್ದಾರೆ.

Related posts

Leave a Reply

Your email address will not be published. Required fields are marked *