Header Ads
Breaking News

ವಿಟ್ಲದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 50ಲೋಡ್ ಮರಳು ವಶಕ್ಕೆ

ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್. ನಿರ್ದೇಶದಂತೆ ಕಂದಾಯ ಹಾಗೂ ಭೂ ವಿಜ್ಞಾನ ಮತ್ತು ಗಣಿ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ೫೦ ಲೋಡ್ ಮರಳನ್ನು ವಶಕ್ಕೆ ಪಡೆದ ಘಟನೆ ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ನಡೆದಿದೆ. ೫೦ ಲೋಡ್ ಮರಳನ್ನು ಖಾಸಗೀ ಹಾಗೂ ಸರ್ಕಾರಿ ಜಾಗದಲ್ಲಿ ಶೇಖರಣೆ ಮಾಡಲಾಗಿತ್ತು. ಭೂ ವಿಜ್ಞಾನ ಮತ್ತು ಗಣಿ ಇಲಾಖೆ ಮರಳನ್ನು ಜಪ್ತಿ ಮಾಡಿ ಕಾನೂನು ಕ್ರಮ ಜರಗಿಸಿದ್ದಾರೆ. ಕಂದಾಯ ಇಲಾಖೆಯಿಂದ ಕಂದಾಯ ನಿರೀಕ್ಷಕರಾದ ದಿವಾಕರ ಮುಗುಳ್ಯ, ಗ್ರಾಮಕರಣಿಕರಾದ ಅನಿಲ್ ಕುಮಾರ್, ಸಹಾಯಕ ಮಹಾಬಲ, ಗಣಿ ಇಲಾಖೆ ನಿರ್ದೇಶಕಿ ಸು? ಮತ್ತು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

Related posts

Leave a Reply

Your email address will not be published. Required fields are marked *