Header Ads
Header Ads
Breaking News

ವಿಟ್ಲ ಚಂದಳಿಕೆ ಸರ್ಕಾರಿ ಪ್ರಾಥಮಿಕ ಶಾಲೆಯ 8ನೇ ತರಗತಿಯ ಉದ್ಘಾಟನಾ ಕಾರ್ಯಕ್ರಮ

ವಿಟ್ಲ: ವಿಟ್ಲ ಸಮೀಪದ ಚಂದಳಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಪ್ರಾರಂಭಿಸಲಾದ 8ನೇ ತರಗತಿಯ ಉದ್ಘಾಟನಾ ಸಮಾರಂಭ ನಡೆಯಿತು.ಚಂದಳಿಕೆ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಭವಾನಿ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಚಂದಳಿಕೆ ಶಾಲೆಯಲ್ಲಿ ವಿವಿಧ ಸಂಘ-ಸಂಸ್ಥೆ, ಹಳೆ ವಿದ್ಯಾರ್ಥಿಗಳ, ದಾನಿಗಳ ಸಹಕಾರದಲ್ಲಿ ನಿರಂತರವಾಗಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಿಕೊಂಡು ಬರಲಾಗಿದೆ. ಮೂಲಭೂತ ಸೌಕರ್ಯ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಇದೀಗ 8ನೇ ತರಗತಿಯನ್ನು ಪ್ರಾರಂಭಿಸಲಾಗಿದೆ ಎಂದರು.
ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ನೋಣಯ್ಯ ಪೂಜಾರಿ ಕಲ್ಲಕಟ್ಟ, ಸದಸ್ಯ ಸಂಜೀವ ಪೂಜಾರಿ ನಿಡ್ಯ, ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಂಗಾಧರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ, ವಿದ್ಯಾವರ್ಧಕ ಸಂಘದ ಸದಸ್ಯೆ ತೆರೆಸಾ, ಶಾಲಾ ಮುಖ್ಯೋಪಾಧ್ಯಾಯ ವಿಶ್ವನಾಥ, ಸದಸ್ಯ ಶ್ರೀನಿವಾಸ್ ಚಂದಳಿಕೆ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *