Header Ads
Header Ads
Breaking News

ವಿಟ್ಲ ಪೊಲೀಸ್ ಠಾಣೆಗೆ ಬಂಟ್ವಾಳ ಶಾಸಕ ದಿಢೀರನೆ ಭೇಟಿ

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಭಯದ ವಾತಾವರಣ ನಿರ್ಮಾಣಗೊಳ್ಳುತ್ತಿದೆ ಸಮಾಜದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗುತ್ತಿದೆ. ವಿಚಾರಣೆ ಹೆಸರಿನಲ್ಲಿ ಅಮಾಯಕರನ್ನು ವಶಕ್ಕೆ ಪಡೆದುಕೊಳ್ಳಬಾರದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಪೊಲೀಸ್ ಇಲಾಖೆಗೆ ಮನವಿ ಮಾಡಿದರು. ಅವರು ಶುಕ್ರವಾರ ರಾತ್ರಿ ವಿಟ್ಲ ಪೊಲೀಸ್ ಠಾಣೆಗೆ ದಿಢೀರನೆ ಭೇಟಿ ನೀಡಿ ಬಂಟ್ವಾಳ ಪೊಲೀಸ್ ಇನ್ಸ್ಪೆಕ್ಟರ್ ಟಿ.ಡಿ ನಾಗರಾಜ್ ಅವರ ಜತೆ ಮಾತುಕತೆ ನಡೆಸಿದರು. ಅಕ್ರಮ ಗೋ ಸಾಗಾಟಗಾರರ ವಿರುದ್ಧ ಪೊಲೀಸರು ಕ್ರಮ ಜರುಗಿಸಬೇಕು. ಕಲ್ಲು ತೂರಾಟ ನಡೆಸಿದವರು ಊರಿಂದ ನಾಪತ್ತೆಯಾಗುತ್ತಾರೆ. ಅವರು ಮನೆಯಲ್ಲಿ ಇರುವುದಿಲ್ಲ. ಆದರೆ ಪೊಲೀಸರು ಅಮಾಯಕರು ಇರುವ ಮನೆಗಳಿಗೆ ನುಗ್ಗಿ ಅವರನ್ನು ಬಂಧಿಸುತ್ತಿದ್ದಾರೆ. ಇದರಿಂದ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣಗೊಳ್ಳುತ್ತಿದೆ. ಇಲ್ಲಿಯ ಜನರು ಶಾಂತಿ ಬಯಸುತ್ತಿದ್ದಾರೆ. ಪೊಲೀಸ್ ಇಲಾಖೆ ತಕ್ಷಣವೇ ಶಾಂತಿ ನಿರ್ಮಾಣಮಾಡುವ ಮಾಡುವ ಕೆಲಸ ಮಾಡಬೇಕು. ಈ ಬಗ್ಗೆ ಪೊಲೀಸ್ ವರಿಷ್ಟಾಧಿಕಾರಿಗಳ ಜತೆ ನಿರಂತರ ಮಾತುಕತೆ ನಡೆಸುತ್ತಿದ್ದೇನೆ ಎಂದು ಹೇಳಿದರು. ಈ ಸಂದರ್ಭ ಬಿಜೆಪಿ ಕ್ಷೇತ್ರ ಅಧ್ಯಕ್ಷ ದೇವದಾಸ್ ಶೆಟ್ಟಿ, ಮುಖಂಡ ದಿನೇಶ್ ಅಮ್ಟೂರು ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *