Header Ads
Header Ads
Header Ads
Breaking News

ವಿಟ್ಲ ಮಹತೋಭಾರ ಪಂಚಲಿಂಗೇಶ್ವರ ದೇವಸ್ಥಾನ: ಕಾಲಾವಧಿ ಜಾತ್ರೋತ್ಸವಕ್ಕೆ ಚಾಲನೆ

ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.


ಜ 14ರಿಂದ ಧ್ವಜಾರೋಹಣಗೊಂಡು ಜ.22ರವರೆಗೆ ವಿವಿಧ ಉತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ, ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಇದರ ಪ್ರಯುಕ್ತ ಹೊರೆಕಾಣಿಕೆ, ಭಜನೆ ಉಲ್ಪೆ ಮೆರವಣಿಗೆ ನಡೆಯಿತು.
ಬೆಳಿಗ್ಗೆ 10 ಗಂಟೆಗೆ ಧ್ವಜಾರೋಹಣ ನೆರವೇರಿಸಲಾಯಿತು. ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಹೊರೆಕಾಣಿಕೆ ಸಂಗ್ರಹಿಸಿ, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಸೀಮೆಯ ಪ್ರತಿ ಮನೆಯಿಂದ, ಫಲವಸ್ತುಗಳ ಜತೆಯಲ್ಲಿ ಹೊರೆಕಾಣಿಕೆಯಲ್ಲಿ ಭಾಗವಹಿಸಿದರು. ಜತೆಗೆ ಬಸದಿಯಿಂದ ಭಜನಾ ಉಲ್ಪೆ ಮೆರವಣಿಗೆ ನಡೆಯಿತು.
ಈ ಸಂದರ್ಭ ವಿಟ್ಲ ಮನೆಯ ಕೃಷ್ಣಯ್ಯ ಕೆ ಹಾಗೂ ನೂರಾರು ಭಕ್ತರು ಭಾಗವಹಿಸಿದರು.

Related posts

Leave a Reply