Header Ads
Header Ads
Breaking News

ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣ : ವಿಡಿಯೋ ಶೇರ್ ಮಾಡಿದ 8 ಮಂದಿಯ ಬಂಧನ

ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಪುತ್ತೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹೌದು. ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳಿಂದ ಸಹಪಾಠಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಈವರೆಗೂ 8 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಮುರಳೀಧರ, ಚಂದ್ರಶೇಖರ ಮಯ್ಯ, ಶ್ರೇಯಾನ್ಸ್. ಎಸ್, ಪೂವಪ್ಪ. ಕೆ, ಪವನ್‍ಕುಮಾರ್. ಡಿ, ಮೋಹಿತ್ ಪಿ.ಜಿ, ಧ್ಯಾನ್ ಎ.ಎನ್, ಅದ್ವಿತ್‍ಕುಮಾರ್ ನಾಯ್ಕ್ ಎಂದು ಗುರುತಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಪ್ರಮುಖ ಆರೋಪಿಗಳಾದ ಗುರುನಂದನ್, ಪ್ರಜ್ವಲ್, ಕಿಶನ್, ಸುನೀಲ್ ಹಾಗೂ ಪ್ರಖ್ಯಾತ್ ಎಂಬುವವರನ್ನು ಬಂಧಿಸಲಾಗಿತ್ತು. ಇದೀಗ ಪ್ರಕರಣದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ನಿನ್ನೆ ಬಂಧನವಾಗಿದ್ದ ಐವರು ಮಂದಿ ಆರೋಪಿಗಳನ್ನು ಜುಲೈ 18ರ ತನಕ ನ್ಯಾಯಂಗ ಬಂಧನದಲ್ಲಿ ಇರಿಸುವಂತೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

Related posts

Leave a Reply

Your email address will not be published. Required fields are marked *