Header Ads
Breaking News

ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು : ಮೂರು ಮಂದಿಗೆ ಗಂಭೀರ ಗಾಯ

ರಾ.ಹೆ. 66ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಐದು ಮಂದಿ ಗಾಯಗೊಂಡ ಘಟನೆ ಕಾಪುವಿನಲ್ಲಿ ನಡೆದಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ಕಾಪು ಹಳೇ ಮೆಸ್ಕಾಂ ಕಛೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿ, ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬ ಉರುಳಿ ಬಿದ್ದಿದೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದ ಐದು ಮಂದಿಯ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಎಸ್ಸೈ ರಾಜಶೇಖರ ಬಿ. ಸಾಗನೂರು, ಮೊದಲಾದವರು ಭೇಟಿ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *