Header Ads
Breaking News

ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮಗಳು ಮೃತ್ಯು

ಬಂಟ್ವಾಳ: ತೋಟದಲ್ಲಿ ಮುರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಹಾಗೂ ಮಗಳು ದಾರುಣವಾಗಿ ಮೃತಪಟ್ಟ ಘಟನೆ ಪಿಲಿಮೊಗರು ಗ್ರಾಮದ ವಾಮದಪದವು ಎಂಬಲ್ಲಿ ನಡೆದಿದೆ. ಚೆನ್ನೈತ್ತೋಡಿ ಗ್ರಾ.ಪಂ.ನ ಮಾಜಿ ಸದಸ್ಯ ಗೋಪಾಲಶೆಟ್ಟಿ (65) ಹಾಗೂ ಅವರ ಮಗಳು ದಿವ್ಯಶ್ರೀ(20) ಮೃತಪಟ್ಟವರಾಗಿದ್ದಾರೆ.


ಮೂಲತಃ ಕೃಷಿಕರಾಗಿರುವ ಗೋಪಾಲಶೆಟ್ಟಿ ಅವರು ತನ್ನ ವಿಕಲಾಂಗ ಚೇತನ ಮಗಳ ಜೊತೆ ತೋಟಕ್ಕೆ ಹೋಗಿದ್ದ ಸಂದರ್ಭ ಈ ಅವಘಡ ನಡೆದಿದೆ. ತೋಟದ ಮಧ್ಯೆ ಹಾದು ಹೋಗಿದ್ದ ವಿದ್ಯುತ್ ತಂತಿ ಮುರಿದು ಬಿದ್ದಿದ್ದು ಅದು ಗಮನಕ್ಕೆ ಬಾರದೆ ಆಕಸ್ಮಿಕವಾಗಿ ಸ್ಪರ್ಶಿಸಿ ಈ ದುರ್ಘಟನೆ ನಡೆದಿದೆ ಎಂದು ಕುಟುಂಬ ಬಂಧುಗಳು ತಿಳಿಸಿದ್ದಾರೆ. ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *