Header Ads
Header Ads
Breaking News

ವಿವಿಧ ಮಾದಕ ವಸ್ತುಗಳ ಮಾರಾಟ ಪ್ರಕರಣ : ಮಂಗಳೂರು ಸಿಸಿಬಿ ಪೊಲೀಸರಿಂದ ನಾಲ್ವರ ಬಂಧನ

ಮಂಗಳೂರು ನಗರದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಯುವಕರ ತಂಡವೊಂದನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳಾದ ಕೋಕೆನ್, ಎಂಡಿಎಂಎ, ಎಲ್‌ಎಸ್‌ಡಿ, ಪಿಲ್ಸ್, ಚರಸ್‌ಗಳನ್ನು ಹೊರರಾಜ್ಯಗಳಿಂದ ಖರೀದಿಸಿ ಮಂಗಳೂರಿನ ಸಾರ್ವಜನಿಕರಿಗೆ ಮಾರಾಟ ಮಾಡಿ ಅಕ್ರಮ ಹಣ ಗಳಿಸಲು ಯತ್ನಿಸುತ್ತಿದ್ದರು. ಈ ಬಗ್ಗೆ ಮಾಹಿತಿ ದೊರೆತ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇದಿತ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡು ನಾಲ್ವರನ್ನು ಬಂಧಿಸಿದ್ದಾರೆ.  ಮಂಗಳೂರಿನ ಕಾರ್‌ಸ್ಟ್ರೀಟ್‌ನ ನಿವಾಸಿ ಕಿಶನ್ ಹೆಗ್ಡೆ, ಹಬೀಲ್ ಅಹ್ಮದ್, ಅನಂತ ಕುಡ್ವ, ಗೋಪಿನಾಥ್ ಭಂಡಾರ್‌ರ್ಕರ್ ಎಂಬವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Related posts

Leave a Reply

Your email address will not be published. Required fields are marked *