Header Ads
Header Ads
Header Ads
Breaking News

ಮೂಡಬಿದ್ರೆಯ ಸಮಾಜ ಮಂದಿರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಮತ್ತು ಪರಿಸರ ನಿರ್ಮಾಣ ಕಾರ್ಯಕ್ರಮ

ಮೂಡುಬಿದಿರೆ : ದ.ಕ.ಜಿ.ಪಂ., ಸಮಗ್ರ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕಚೇರಿ ಮೂಡುಬಿದಿರೆ ಇವುಗಳ ಆಶ್ರಯದಲ್ಲಿ ಸಮಾಜಮಂದಿರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಮತ್ತು ಪರಿಸರ ನಿರ್ಮಾಣ ಕಾರ್ಯಕ್ರಮವು ನಡೆಯಿತು. ಮೂಡುಬಿದಿರೆ ಲಯನ್ಸ್ ಕ್ಲಬ್ ಅಧ್ಯಕ್ಷ ಮೆಲ್ವಿನ್ ಡಿ’ಕೋಸ್ತ ಉದ್ಘಾಟಿಸಿ ಶುಭ ಹಾರೈಸಿದರು. 

ಜಿ. ಪಂ. ಸದಸ್ಯ ಕೆ. ಪಿ. ಸುಚರಿತ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕತ್ರಶಿಕ್ಷಣಾಧಿಕಾರಿ ಆಶಾ ಎಂ. ಎಸ್. ಅಧ್ಯಕ್ಷತೆ ವಹಿಸಿದ್ದರು. ಜೈನ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ದಿಕ್ಸೂಚಿ ಭಾಷಣ ಮಾಡಿದರು. ಶಿರ್ತಾಡಿ ಲಯನ್ಸ್ ಕಾರ್ಯದರ್ಶಿ ರಾಲ್ ಪಿಂಟೋ, ಮೂಡುಬಿದಿರೆ ತಾಲೂಕು ಕ.ರಾ. ಪ್ರಾ.ಶಾ. ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮೂಡುಬಿದಿರೆಯ ಅರಮನೆ ಬಾಗಿಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಯ ಮುಖ್ಯಸ್ಥ ಪ್ರಕಾಶ್ ಶೆಟ್ಟಿಗಾರ್ ಅವರನ್ನು ಸಮ್ಮಾನಿಸಲಾಯಿತು.

ವಿಕಲ ಚೇತನರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು ನಡೆದವು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ನಂತರ ವಿದ್ಯಾರ್ಥಿಗಳನ್ನು ಕಡಲಕೆರೆಯಲ್ಲಿರುವ ಸಾಲುಮರದ ತಿಮ್ಮಕ್ಕ ವೃಕ್ಷೆಧ್ಯಾನಕ್ಕೆ ಕರೆದುಕೊಂಡು ಹೋಗಲಾಯಿತು.

 

Related posts

Leave a Reply

Your email address will not be published. Required fields are marked *