Header Ads
Breaking News

ವೆನ್ಲಾಕ್ ಆಸ್ಪತ್ರೆ ಕೊರೊನಾ ಆಸ್ಪತ್ರೆಯಾಗಿ ಪರಿವರ್ತನೆ : ಹೊರ ರೋಗಿಗಳಿಗೆ ಸರ್ಕಾರದ ವೆಚ್ಚದಲ್ಲೇ ಚಿಕಿತ್ಸೆಗೆ ವ್ಯವಸ್ಥೆ

ಕರಾವಳಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯನ್ನು ಕೊರೊನಾ ಆಸ್ಪತ್ರೆಯನ್ನಾಗಿ ಘೋಷಿಸಲಾಗಿದೆ. ಆಸ್ಪತ್ರೆಯಲ್ಲಿದ್ದ ಇತರ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಶಿಫ್ಟ್ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಗುರುವಾರ ಪತ್ರಿಕಾಗೋಷ್ಟಿ ನಡೆಸಿ ಈ ಮಾಹಿತಿ ನೀಡಿದ ಉಸ್ತುವಾರಿ ಸಚಿವರು, ವೆನ್ಲಾಕ್ ಆಸ್ಪತ್ರೆಯಲ್ಲಿರುವ ಇತರ ರೋಗಿಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಮತ್ತು ಉಚಿತವಾಗಿಯೇ ಚಿಕಿತ್ಸೆ ನೀಡಲಾಗುವುದು ಎಂದರು. ವೆನ್ಲಾಕ್ ಆಸ್ಪತ್ರೆಯ 250 ಹಾಸಿಗೆಗಳ ಕಟ್ಟಡವನ್ನು ಸಂಪೂರ್ಣವಾಗಿ ಕೋವಿಡ್-19 ಪಾಸಿಟಿವ್ ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡಲಾಗುವುದು. ಆಸ್ಪತ್ರೆಯ 20 ಹಾಸಿಗೆಯುಳ್ಳ ಆಯುಷ್ ಕಟ್ಟಡದಲ್ಲಿ ಶಂಕಿತ ರೋಗಿಗಳಿಗೆ ಮೀಸಲಿಡಲಾಗುವುದು. ಖಾಸಗಿ ಆಸ್ಪತ್ರೆ ಯಲ್ಲಿರುವ ಕೊರೊನಾ ಶಂಕಿತನ್ನೂ ವೆನ್ಲಾಕ್ ಗೆ ದಾಖಲು ಮಾಡಲಾಗುವುದು ಎಂದರು. ಈಗಾಗಲೇ ವೆನ್ಲಾಕ್ ನಲ್ಲಿ ದಾಖಲಾಗಿರುವ ಇತರ 218 ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗುವುದು. ಬಡ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಇದರೊಂದಿಗೆ ಪ್ರತೀ ಮೆಡಿಕಲ್ ಕಾಲೇಜುನಲ್ಲಿ 20 ಹಾಸಿಗೆಗಳ ಐಸೋಲೇಷನ್ ವಾರ್ಡ್ ನಿರ್ಮಾಣ ಮಾಡಲು ವ್ಯವಸ್ಥೆ ಮಾಡಲಾಗಿ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಭಾಗಿಯಾಗಿದ್ದರು.

Related posts

Leave a Reply

Your email address will not be published. Required fields are marked *