Header Ads
Breaking News

ವೆನ್‍ಲಾಕ್ ಆಸ್ಪತ್ರೆಯ ಬಗ್ಗೆ ಅಪಪ್ರಚಾರ ವದಂತಿಗಳಿಗೆ ಕಿವಿಗೊಡಬೇಡಿ : ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ಪಷ್ಟನೆ

ವೆನ್ ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಯ ಕುರಿತು ಹರಡುತ್ತಿರುವ ವದಂತಿಗಳಿಗೆ ಮಂಗಳೂರು ಜಿಲ್ಲಾಧಿಕಾರಿ ಸಿಂಧೂ. ಬಿ. ರೂಪೇಶ್ ಸ್ಪಷ್ಟನೆ ನೀಡಿದ್ದಾರೆ.

ಕೋವಿಡ್ 19 ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ ವೆನ್ ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತ ವ್ಯಕ್ತಿಯ ಚಿಕಿತ್ಸೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕಳೆದೆರಡು ದಿನಗಳಿಂದ ನಾನಾ ಸುದ್ಧಿಗಳು ಹರಿದಾಡುತ್ತಲೇ ಇದೆ. ಈ ಕುರಿತು ಜಿಲ್ಲಾಧಿಕಾರಿ ಸಿಂಧೂ.ಬಿ. ರೂಪೇಶ್ ಸ್ಪಷ್ಟನೆ ನೀಡಿದ್ದು, ಕೋವಿಡ್ 19 ಚಿಕಿತ್ಸೆಗೆ ವೆನ್ ಲಾಕ್‍ನ ಹೊಸ ಆಯುಷ್ ಆಸ್ಪತ್ರೆ ಹಾಗೂ ಇನ್ನೊಂದು ಬ್ಲಾಕ್ ನಲ್ಲಿ ಪ್ರತ್ಯೇಕವಾಗಿ ವಿಭಾಗವನ್ನು ತೆರೆಯಲಾಗಿದ್ದು, ಅಲ್ಲಿ ಕೋವಿಡ್ ಗೆ ಸಂಬಂಧಿಸಿದ ರೋಗಿಗಳನ್ನು ಮಾತ್ರ ನೋಡುತ್ತಿದ್ದೇವೆ, ಅವರನ್ನು ಇತರ ರೋಗಿಗಳೊಂದಿಗೆ ಸೇರಿಸಿಕೊಳ್ಳುತ್ತಾ ಇಲ್ಲ, ಇನ್ನು ಸೋಂಕು ಇರುವ ಶಂಕಿತ ವ್ಯಕ್ತಿಯನ್ನು ಪ್ರತ್ಯೇಕವಾಗಿ ಪರೀಕ್ಷೆ ಮಾಡಿ ಅವರ ವರದಿ ನೆಗೆಟಿವ್ ಬಂದರೆ ಅವರನ್ನು ಮನೆಗೆ ಕಳುಹಿಸುತ್ತೇವೆ ಎಂದರು. ಜನರು ಯಾವುದೇ ರೀತಿಯ ಸುಳ್ಳು ವದಂತಿಗಳನ್ನು ನಂಬಬೇಡಿ, ಸಾಮಾಜಿಕ ಜಾಲತಾಣದಲ್ಲಿ ಬರುವ ಅನಧಿಕೃತ ಸಂದೇಶಗಳಿಗೆ ಕಿವಿಗೊಡಬೇಡಿ,ಜನರು ಭಯಪಡುವ ಅಗತ್ಯವಿಲ್ಲ, ಯಾವುದೇ ಪರಿಸ್ಥಿತಿಯಲ್ಲೂ ಒಂದಾಗಿರುವ ಸಾಮರ್ಥ್ಯ ನಮ್ಮದಾಗಬೇಕು ಎಂದಿದ್ದಾರೆ.

Related posts

Leave a Reply

Your email address will not be published. Required fields are marked *