Header Ads
Breaking News

ಶಾಲಾ ಕಾಲೇಜು ಆರಂಭ, ಆನ್‍ಲೈನ್ ತರಗತಿ ಬಗ್ಗೆ ನಿರ್ಧಾರ ಕೈಗೊಂಡಿಲ್ಲ : ಸಚಿವ ಸುರೇಶ್ ಕುಮಾರ್ ಹೇಳಿಕೆ

ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್‌ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯಗಳನ್ನು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಜನೆಯ ಪರ ಕೈಗೊಳ್ಳಲು ಸಮರ್ಥವಾಗಿದೆ ಮತ್ತು ಅಂತ ನಿರ್ಣಯಗಳನ್ನು ಕೈಗೊಳ್ಳುತ್ತದೆ ಎಂದಿರುವ ಸಚಿವರು ಪಾಲಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕುರಿತು ಯಾವುದೇ ಆತಂಕ ಅಥವಾ ಕಪೋಲಕಲ್ಪಿತ ಸುಳ್ಳುಸುದ್ದಿಗಳಿಗೆ ಕಿವಿ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.ಸರ್ಕಾರ ತಾನಾಗಿಯೇ ಯಾವುದೇ ನಿರ್ಣಯ ಅಧಿಕೃತವಾಗಿ ಪ್ರಕಟಿಸುವ ಮುನ್ನ ಮಾಧ್ಯಮದಲ್ಲಿ ಪ್ರಸಾರವಾಗುವ ಅಥವಾ ಪ್ರಕಟವಾಗುವ ಯಾವುದೇ ಸುದ್ದಿಯನ್ನು ನಿಜ ಎಂದು ನಂಬಬೇಡಿ ಎಂದೂ ಅವರು ಕೋರಿದ್ದಾರೆ.ತಜ್ಞರ ಸಮಿತಿ ವರದಿ ಅಥವಾ ಬೇರೆ ಬೇರೆ ಆಯಾಮಗಳಲ್ಲಿ ಸರ್ಕಾರದ ಹಂತದಲ್ಲಿ ನಡೆಯುವ ಚರ್ಚೆಗಳು ಎಂದಿಗೂ ಅಂತಿಮ ನಿರ್ಣಯವಾಗಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ.

Related posts

Leave a Reply

Your email address will not be published. Required fields are marked *