Header Ads
Breaking News

ಶಾಲೆ ಪ್ರಾರಂಭಿಸಲು ಸರಕಾರದ ಚಿಂತನೆ ನಡೆಸಿರುವುದು ಸರಿಯಲ್ಲ : ಉಡುಪಿಯಲ್ಲಿ ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ಶೀಷ್ ವಿರೋಧ

ಶಾಲೆಗಳನ್ನು ಪ್ರಾರಂಭಿಸಲು ಸರಕಾರ ಚಿಂತನೆಯನ್ನು ನಡೆಸಿರುವುದನ್ನು ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ಶೀಷ್ ವಿರೋಧಿಸಿದ್ದಾರೆ. ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರಕಾರ ಯಾವುದೇ ಮಾರ್ಗಸೂಚಿಯನ್ನು ನೀಡದೆ ಶಾಲೆಗಳನ್ನು ಪ್ರಾರಂಭಿಸಲು ಚಿಂತನೆಯನ್ನು ನಡೆಸಿದೆ ಇದರಿಂದ ಪೋಷಕರು ಗೊಂದಲದಲ್ಲಿದ್ದಾರೆ. ಶಾಲಾ ಮಕ್ಕಳಿಗೆ ಸರಿಯಾದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ತಿಳುವಳಿಕೆ ಇರುವುದಿಲ್ಲ. ಸಾವಿರಾರು ಮಕ್ಕಳು ಒಂದು ಶಾಲೆಯಲ್ಲಿ ಸೇರುವುದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಷ್ಟವಾಗುತ್ತದೆ. ಇದರಿಂದ ಕೊರೋನಾ ಮಹಾಮಾರಿ ಸಮುದಾಯದಲ್ಲಿ ಹರಡುವ ಅಪಾಯವಿದೆ. ಆನ್ಲೈನ್ ಮೂಲಕ ವಿದ್ಯಾಭ್ಯಾಸವನ್ನು ನೀಡುವುದು ಅಪಾಯಕಾರಿ. ಮಕ್ಕಳ ಆರೋಗ ದೃಷ್ಟಿಯಲ್ಲಿಯೂ ಕೂಡ ಆನ್ಲೈನ್ ಮೂಲಕ ಶಿಕ್ಷಣವನ್ನು ನೀಡುವುದು ಸರಿಯಾದ ಮಾರ್ಗವಲ್ಲ. ಮುಂದಿನ ಮಳೆಗಾಲ ಮುಗಿದ ಬಳಿಕ ನವೆಂಬರ್ ನಂತರ ಶಾಲೆಯನ್ನು ಪ್ರಾರಂಭಿಸುವುದು ಸೂಕ್ತ. ಈ ಬಗ್ಗೆ ಶಿಕ್ಷಣ ಸಚಿವರಿಗೆ ಮನವಿಯನ್ನು ಮಾಡಲಾಗುವುದು. ಶಾಲೆ ಮರು ಪ್ರಾರಂಭದ ಬಗ್ಗೆ ಸೂಕ್ತ ಮಾರ್ಗಸೂಚಿಯನ್ನು ಸರಕಾರ ನೀಡಬೇಕು ಕೊರೋನಾ ಸೋಂಕನ್ನು ತಡೆಗಟ್ಟಲು ಯಾವ ರೀತಿಯ ಕ್ರಮವನ್ನು ಕೈಗೊಳ್ಳಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

Related posts

Leave a Reply

Your email address will not be published. Required fields are marked *