Header Ads
Breaking News

ಎಡಪದವಿನಲ್ಲಿ ಹಕ್ಕುಪತ್ರ ಸಹಿತ ವಿವಿಧ ಸೌಲಭ್ಯ ವಿತರಣೆ

ಎಡಪದವಿನಲ್ಲಿ 96 ಫಲಾನುಭವಿಗಳಿಗೆ ಹಕ್ಕುಪತ್ರ, ಅಲೆಮಾರಿ ಜನಾಂಗದವರಿಗೆ ಆದೇಶ ಪತ್ರ, ಪ್ರಕೃತಿ ವಿಕೋಪ ಪರಿಹಾರ ನಿಧಿ, ವಿಧವಾ ವೇತನ, ವೃದ್ಧಾಪ್ಯ ವೇತನ, ಹುಲ್ಲು ಕತ್ತರಿಸುವ ಯಂತ್ರ, 1 ಟಿಲ್ಲರ್ ಯಂತ್ರವನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಫಲಾನುಭವಿಗಳಿಗೆ ವಿತರಿಸಿದರು. ಎಡಪದವು ಶ್ರೀರಾಮ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ, ತಹಶೀಲ್ದಾರ್ ಗುರುಪ್ರಸಾದ್, ಜಿಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಸಚಿನ್ ಕುಮಾರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ವೀಣಾ, ಉಪತಹಶೀಲ್ದಾರ್ ಶಿವಪ್ರಸಾದ್, ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *