Header Ads
Header Ads
Header Ads
Header Ads
Header Ads
Header Ads
Breaking News

ಶಾಸಕ ಮಠಂದೂರು ವಿರುದ್ಧ ಎಫ್‌ಐಆರ್ ದಾಖಲಿಸಲು ಆಗ್ರಹ : ಜಿಲ್ಲಾ ಕಾಂಗ್ರೆಸ್ ಮುಖಂಡರಿಂದ ಪೊಲೀಸ್ ಆಯುಕ್ತರಿಗೆ ಮನವಿ

ಸಸಿಕಾಂತ್ ಸೆಂಥಿಲ್ ದೇಶದ್ರೋಹಿ’ ಎಂದು ಪುತ್ತೂರು ಶಾಸಕ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವ್ ಮಠಂದೂರು ಯಾವುದೇ ದಾಖಲೆಯಿಲ್ಲದೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸಮಾಜಕ್ಕೆ ತಪ್ಪು ಸಂದೇಶ ರವಾನಿಸಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಂಧಿಸಬೇಕೆಂದು ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಮುಖಂಡರು ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರಿಗೆ ದೂರು ನೀಡಿದ್ದಾರೆ.

ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ, ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರೇ ಹೇಳಿಕೊಂಡಿದ್ದರು. ಉತ್ತಮ ಅಧಿಕಾರಿಗೆ ‘ದೇಶದ್ರೋಹಿ’ ಶಬ್ದ ಬಳಸುವ ಮೂಲಕ ಜಿಲ್ಲೆಯ ಜನತೆಗೆ ನೋವುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು. ಐಎಎಸ್ ಅಧಿಕಾರಿಗಳು ಸೇವೆ ಸಲ್ಲಿಸುವ ಹಾಗೂ ಇತರ ಅಧಿಕಾರಿಗಳಿಗೆ ಸಾಮಾಜಿಕ ಸ್ಪಂದನೆಗೆ ಮತ್ತು ಕರ್ತವ್ಯ ನಿರ್ವಹಣೆಯಲ್ಲಿ ಮಾನಸಿಕ ಸ್ಥೈರ್ಯ ಕುಗ್ಗಿಸುವ ತಂತ್ರ ಇದಾಗಿದೆ. ಅಲ್ಲದೆ, ವ್ಯಕ್ತಿ ಸ್ವಾತಂತ್ರ ಕಸಿದುಕೊಂಡಂತಾಗಿದೆ. ಇದೇ ರೀತಿ ಕಳೆದ ಎರಡು ದಿನಗಳಿಂದ ಶಾಸಕ ಮಠಂದೂರು ನೇತೃತ್ವದಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಅಸಂಬದ್ಧ ಹೇಳಿಕೆಗಳನ್ನು ಪ್ರಕಟಿಸಿದ್ದಾರೆ. ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಒತ್ತಾಯಿಸಿದರು.

ಈ ಸಂದರ್ಭ ದ.ಕ. ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಇಬ್ರಾಹೀಂ ಕೊಡಿಜಾಲ್, ಪಿ.ವಿ.ಮೋಹನ್, ಸದಾಶಿವ ಉಳ್ಳಾಲ, ಶಾಹುಲ್ ಹಮೀದ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *