Header Ads
Header Ads
Header Ads
Breaking News

ಶಿಕ್ಷಣ ಇಲಾಖೆಯ ಆಯುಕ್ತರ ಸುತ್ತೊಲೆ ವಿವಾದ : ಉಡುಪಿಯಲ್ಲಿ ಡಿ.ಎಸ್.ಎಸ್‌ನಿಂದ ಪ್ರತಿಭಟನೆ

ಕರ್ನಾಟಕ ಸರಕಾರದ ಶಿಕ್ಷಣ ಇಲಾಖೆ ಹೊರಡಿಸುರುವ ಸುತ್ತೋಲೆಯನ್ನ ವಾಪಾಸ್ ಮಾಡಬೇಕು ಹಾಗೂ ಅಂಬೇಡ್ಕರ್‌ಗೆ ಅವಮಾನ ಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿದರು.

ಉಡುಪಿಯ ಅಜ್ಜರಕಾಡು ಹುತಾತ್ಮ ವೇದಿಕೆಯ ಬಳಿ ಪ್ರತಿಭಟನೆ ನಡೆಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸರಕಾರ ಹಾಗೂ ಅಧಿಕಾರಿಗಳ ವಿರುದ್ದ ಘೋಷಣೆಗಳನ್ನು ಕೂಗಿದರು. ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ, ಅನೇಕ ಪುರುಷ ಮತ್ತು ಮಹಿಳೆಯರು ಸೇರಿ ಮಾಡಿರುವಂತಹ ಒಂದು ಸಾಮೂಹಿಕ ಪ್ರಯತ್ನದ ಫಲವಾಗಿದೆ, ಹಲವಾರು ಜನರಿಂದ ಕೂಡಿದ್ದ ಸಂವಿಧಾನ ರಚನಾ ಸಭೆ ಎಂದು ಕರೆಯಲ್ಪಟ್ಟ ತಂಡದಿಂದ ನಮ್ಮ ಸಂವಿಧಾನ ರಚಿಸಲಾಯಿತು ಎಂದು ಶಿಕ್ಷಣ ಇಲಾಖೆಯ ಆಯುಕ್ತ ಎಲ್ಲಾ ಶಾಲೆಗಳಿಗೆ ಸುತ್ತೋಲೆ ಕಳುಹಿಸಿದ್ದು ಇದು ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವಾಗಿದೆ. ತಕ್ಷಣ ಸುತ್ತೊಲೆ ವಾಪಾಸ್ ತೆಗೆದುಕೊಳ್ಳಬೇಕು ಮತ್ತು ಶಿಕ್ಷಣ ಆಯುಕ್ತರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾ ಕಾರರು ಆಗ್ರಹಿಸಿದರು.

 

Related posts

Leave a Reply

Your email address will not be published. Required fields are marked *