Header Ads
Breaking News

ಶಿರ್ತಾಡಿಯಿಂದ ಓಡದಕರಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ

ಮೂಡುಬಿದಿರೆ: ತಾಲೂಕಿನ ಮೂಡುಮಾರ್ನಾಡಿನಲ್ಲಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಕಾಸನ್‍ಬೆಟ್ಟು ರಸ್ತೆ ಅಭಿವೃದ್ಧಿ ಮತ್ತು ಸುಮಾರು 50 ಲಕ್ಷ ವೆಚ್ಚದಲ್ಲಿ ಶಿರ್ತಾಡಿಯಿಂದ ಓಡದಕರಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಉಮಾನಾಥ ಕೋಟ್ಯಾನ್ ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಕೋಟ್ಯಾನ್ ಅವರು ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ರಸ್ತೆಗಳ ವಿಸ್ತರಣೆಯಿಂದ ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರದ `ಜಲ್‍ಜೀವನ್ ಮಿಷನ್’ ಯೋಜನೆಯಡಿಯಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ದಿನದ 24 ಗಂಟೆ ನಿರಂತರ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಪಿ ಸುಜಾತ, ತಾಲ್ಲೂಕು ಪಂಚಾಯತ್ ಸದಸ್ಯರಾದ ನಾಗವೇಣಿ, ಪ್ರಶಾಂತ್ ಮತ್ಲ್‍ಮಾರ್, ಪಡುಮಾರ್ನಾಡು ಗ್ರಾಮ ಪಂಚಾಯತ್‍ನ ಮಾಜಿ ಅಧ್ಯಕ್ಷರಾದ ಶ್ರೀನಾಥ್ ಸುವರ್ಣ, ಶಿರ್ತಾಡಿ ಗ್ರಾ.ಪಂನ ಮಾಜಿ ಅಧ್ಯಕ್ಷೆ ಲತಾ ಪಿ.ಹೆಗ್ಡೆ, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *