Header Ads
Breaking News

ಶ್ರೀಧರ್ ಕೋಡಿಜಾಲ್ ನಿಧನ

ಬಂಟ್ವಾಳ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಧರ್ ಕೋಡಿಜಾಲ್ ಇಂದು  ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು . ಮೃತರು .ಪತ್ನಿ ನಳಿನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅವರ ಅಕಾಲಿಕ ನಿಧನ ಅವರ ಬಂಧು ಮಿತ್ರರಲ್ಲಿ ದಿಗ್ಭ್ರಮೆ ಮೂಡಿಸಿದೆ.

ಮೂಲತ : ಪುತ್ತೂರು ಕಸ್ಬಾ ಕೋಡ ಜಾಲು ನಿವಾಸಿಯಾಗಿದ್ದ , ಪ್ರಸ್ತುತ ಪುತ್ತೂರಿನ ಜಿಡೆಕಲ್ಲು ನಲ್ಲಿ ವಾಸ್ತವ್ಯ ಹೊಂದಿದ್ದ ಶ್ರೀಧರ್ ರವರಿಗೆ ನಿನ್ನೆ ಸಂಜೆ ಎದೆ ನೋವು ಕಾಣಿಸಿಕೊಂಡಿದ್ದು , ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುರತ್ಕಲ್ಲಿನ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅವರು ಇತ್ತೀಚಿಗೆ ಕೊವೀಡ್ ವಾರಿಯರ್ ಆಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು.
ಸುಮಾರು 20 ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯ ಕಂದಾಯ ಇಲಾಖೆಯ ವಿವಿಧ ವಿಭಾಗಗಳಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದರು. ಪುತ್ತೂರು ತಾಲೂಕಿನ ಪಾಲಿತ್ತಡಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ (ವಿಎ)ಯಾಗಿ ವೃತ್ತಿ ಜೀವನ ಆರಂಭಿಸಿದ ಇವರು ಬಳಿಕ ಮೂಡಬಿದಿರೆಯ ದಾರಿಗುಡ್ದೆ ,ಬೆಳ್ಮನ್ನುನಲ್ಲಿ ವಿ ಎ ಆಗಿ ಕರ್ತವ್ಯ ನಿರ್ವಹಿಸಿದ್ದರು. ಸುಳ್ಯ ಹಾಗೂ ಉಪ್ಪಿನಂಗಡಿ ಯಲ್ಲಿ ರೆವೆನ್ಯೂ ಇನ್ಸ್ಪೆಕ್ಟರ್ ( RI)ಆಗಿಯೂ ಕಾರ್ಯ ನಿರ್ವಹಿಸಿದ್ದರು. ಒಂದಷ್ಟು ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಯೂ ಕಾರ್ಯನಿರ್ವಹಿಸಿದ್ದರು. ಕಳೆದ ಕೆಲ ವರ್ಷಗಳಿಂದ ಪುತ್ತೂರು ತಾಲೂಕು ಕಚೇರಿಯಲ್ಲಿ ಉಪ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಅವರು ಬಂಟ್ವಾಳಕ್ಕೆ ವರ್ಗಾವಣೆಗೊಂಡಿದ್ದರು.

Related posts

Leave a Reply

Your email address will not be published. Required fields are marked *