Header Ads
Header Ads
Breaking News

ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ವತಿಯಿಂದ ದಂತ ತಪಾಸಣಾ ಶಿಬಿರ ಆಯೋಜನೆ

ಮುಕ್ಕಾದಲ್ಲಿರುವ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್‌ನ ಆಯೋಜನೆಯಲ್ಲಿ ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‌ನಲ್ಲಿ ಕಾಲೇಜಿನ ಬಿಬಿಎ ಎವೀಯೆಶನ್ ಮತ್ತು ಬಿಸಿಎ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ದಂತ ಶಿಬಿರವನ್ನು ಆಯೋಜಿಸಲಾಗಿತ್ತು.ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್‌ನ ದಂತ ವೈದ್ಯ ಶಾಸ್ತ್ರ ವಿಭಾಗದ ಡಾ. ಶ್ರೀವಿದ್ಯಾ ಭಟ್ ರವರು ಮೌಖಿಕ ಆರೋಗ್ಯ ಮತ್ತು ಬಾಯಿಗೆ ಆರೋಗ್ಯಕ್ಕಾಗಿ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮಾಹಿತಿಯನ್ನು ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ದಂತ ಆರೋಗ್ಯ ತಪಾಸಣೆಯನ್ನು ಮಾಡಲಾಯಿತು. ಒಟ್ಟು 125ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. ಈ ವೇಳೆ ಶ್ರೀನಿವಾಸ್ ಸಿಟಿ ಕ್ಯಾಂಪಸ್ ನ ಉಪನ್ಯಾಸಕರು ಹಾಗೂ ಸಿಸಿಐಸಿಯ ಅಧ್ಯಾಪಕರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *