Header Ads
Breaking News

ಶ್ರೀನಿವಾಸ್ ವಿಶ್ವವಿದ್ಯಾಲಯದ 2ನೇ ವಾರ್ಷಿಕ ಘಟಿಕೋತ್ಸವ : ಉಡುಪಿಯ ಶ್ರೀ ವಿದ್ಯಾತೀರ್ಥ ಸ್ವಾಮಿಜಿಯವರಿಗೆ ಗೌರವ ಡಾಕ್ಟರೇಟ್

ಮಂಗಳೂರು: ಕೋವಿಡ್-19ನ ಈ ಸಂದಿಘ್ನ ಪರಿಸ್ಥಿತಿಯು ಎಲ್ಲಾ ಕ್ಷೇತ್ರಗಳಂತೆ ಶೈಕ್ಷಣಿಕ ಕ್ಷೇತ್ರಕ್ಕೂ ಆವರಿಸಿಕೊಂಡಿದೆ. ಶೈಕ್ಷಣಿಕ ಕಾರ್ಯಕ್ರಮಗಳಂತಹ ವೆಬಿನಾರ್‍ಗಳು ಆನ್‍ಲೈನ್‍ನಲ್ಲಿ ನಡೆಯುವಂತೆ ಇದೀಗ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಾಮಾನ್ಯ ತರಗತಿಗಳನ್ನು ಸಹ ಆನ್‍ಲೈನ್ ವೇದಿಕೆಯ ಮೂಲಕ ಸಂಭಾಷಣೆ ನಡೆಸುತ್ತಿದ್ದಾರೆ. ಕೋವಿಡ್-19 ನಿಂದ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗಬಾರದು ಎಂಬ ಉದ್ದೇಶದೊಂದಿಗೆ ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯವು ಅಕ್ಟೋಬರ್ 20ರಂದು ಸಂಜೆ 4 ಗಂಟೆಗೆ ತನ್ನ 2ನೇ ವಾರ್ಷಿಕ ಘಟಿಕೋತ್ಸವವನ್ನು ವರ್ಚುವಲ್ ವೇದಿಕೆಯ ಮೂಲಕ ನಡೆಸಲು ತೀರ್ಮಾನಿಸಿದೆ.

ಈ ಘಟಿಕೋತ್ಸವದಲ್ಲಿ ಉಡುಪಿಯ ಪಲಿಮಾರು ಮಠದ ಶ್ರೀ ಶ್ರೀ ಶ್ರೀ ವಿದ್ಯಾತೀರ್ಥ ಸ್ವಾಮಿಜಿಯವರಿಗೆ ಶ್ರೀನಿವಾಸ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ (ವೇದಿಕ್ ಸೈನ್ಸ್ &ದ್ವೈತ ವೇದಾಂತ) ಪದವಿಯನ್ನು ನೀಡಲಿರುವುದು. 232 ಪದವಿ ಹಾಗೂ 87 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, 1 ಸಂಶೋಧನಾ ವಿದ್ಯಾರ್ಥಿಗೆ ಪಿ. ಹೆಚ್.ಡಿ ಪದವಿ 1 ಡಿ.ಲಿಟ್ ಪದವಿಯಂತೆ, ಒಟ್ಟು 38 ರ್ಯಾಂ ಕ್‍ಗಳೊಂದಿಗೆ 11 ಚಿನ್ನದ ಪದಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು.

ಡಾ. ಸಿ. ಎನ್. ಅಶ್ವತ್ ನಾರಾಯಣ್ – ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಮುಖ್ಯ ಅತಿಥಿಯಾಗಿ ಭಾಗವಹಿಸಿ ವರ್ಚುವಲ್ ವೇದಿಕೆಯ ಮೂಲಕ ಘಟಿಕೋತ್ಸವವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಸಿಎ. ಎ. ರಾಘವೇಂದ್ರ ರಾವ್‍ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿರುವರು.

ಶ್ರೀನಿವಾಸ್ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್, ಕುಲಪತಿ ಡಾ. ಪಿ.ಎಸ್. ಐತಾಳ್, ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರುಗಳಾದ ಶ್ರೀಮತಿ ವಿಜಯಲಕ್ಷ್ಮಿ ಆರ್. ರಾವ್, ಪ್ರೊ.  ಎ. ಮಿತ್ರಾ ಎಸ್. ರಾವ್, ಶ್ರೀಮತಿ ಪದ್ಮಿನಿ ಕುಮಾರ್, ಕುಲಸಚಿವರುಗಳಾದ ಡಾ. ಅನಿಲ್ ಕುಮಾರ್, ಡಾ. ಶ್ರೀನಿವಾಸ್ ಮಯ್ಯ (ಮೌಲ್ಯಮಾಪನ), ಡಾ. ಅಜಯ್ ಕುಮಾರ್ (ಅಭಿವೃದ್ಧಿ), ಆದಿತ್ಯ ಕುಮಾರ್ (ಶೈಕ್ಷಣಿಕ ಮತ್ತು ಅಭಿವೃದ್ಧಿ) ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಆನ್‍ಲೈನ ಯೂಟ್ಯೂಬ್ ವೇದಿಕೆಯ ಮೂಲಕ ಈ ಕಾರ್ಯಕ್ರಮವನ್ನು https://youtu.be/xHNPya8BSeA ಲಿಂಕ್ ಬಳಸಿ ವೀಕ್ಷಿಸಬಹುದು

Related posts

Leave a Reply

Your email address will not be published. Required fields are marked *