Header Ads
Breaking News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ) : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರಿಂದ ಉದ್ಘಾಟನೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆಯ 2 ನೇ ಜಿಲ್ಲಾ ಕಚೇರಿ ಉದ್ಘಾಟನೆ ಪುತ್ತೂರು ಎಪಿಎಂಸಿ ರಸ್ತೆಯ ಬಳಿ ಡಿ.9ರಂದು ನಡೆದಿದ್ದು ಅದರ ಉದ್ಘಾಟನೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆಯವರು ನೆರವೇರಿಸಿದರು. ಬಳಿಕ ಸಾಲ್ಮರ ಕೊಟೇಚಾ ಹಾಲ್ ನಲ್ಲಿ ಉದ್ಘಾಟನಾ ಸಮಾರಂಭ ನಡೆಯಿತು.

ಸಮಾರಂಭವನ್ನು ಉದ್ಘಾಟಿಸಿದ ಡಾ|ಡಿ.ವಿರೇಂದ್ರ ಹೆಗ್ಡೆ ಅವರು ಮಾತನಾಡಿ ಭೋಗ ಜೀವನದ ಬದಲು ಕರ್ಮಜೀವನ ಆಗಬೇಕು. ಇದು ಸ್ವಸಹಾಯ ಸಂಘದಿಂದ ಸಾಧ್ಯ. ಒಳ್ಳೆಯ ಭವಿಷ್ಯಕ್ಕಾಗಿ ಗ್ರಾಮೀಣ ಭಾಗದಲ್ಲಿ ಸ್ವಸಹಾಯ ಸಂಘ ಉತ್ತಮ ಫಲ ಕೊಡುತ್ತಿದೆ ಎಂದರು.

ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಡಾ.ಎಂಕೆ ಪ್ರಸಾದ್, ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ.ಎಲ್. ಎಚ್.ಮಂಜುನಾಥ್, ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಎನ್.ಎ ರಾಮಚಂದ್ರ, ತಾಲೂಕು ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ, ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಾರಂಭದಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *