Header Ads
Header Ads
Breaking News

ಶ್ರೀ ರಾಮ್ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪೆನಿ ಲಿ. ವತಿಯಿಂದ ವಿದ್ಯಾರ್ಥಿ ವೇತನಾ ವಿತರಣಾ ಕಾರ್ಯಕ್ರಮ

ಶ್ರೀ ರಾಮ್ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಇದರ ವತಿಯಿಂದ ಪಾರಡಿಗಂ ಪ್ಲಾಜಾ, ಎಬಿ ಶೆಟ್ಟಿ ಸರ್ಕಲ್ ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ವೇತನಾ ವಿತರಣಾ ಕಾರ್ಯಕ್ರಮ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರು ಯುಟಿ ಖಾದರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ್ರು ಬಳಿಕ ಮಾತನಾಡಿದ ಅವರು, ಶ್ರೀ ರಾಮ್ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಸಂಸ್ಥೆಯು ಶ್ರೀ ರಾಮ್ ಫೌಂಡೇಶನ್‌ನ ಮೂಲಕ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡ್ತಾ ದೇಶಕ್ಕೆ ಹಾಗೂ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡ್ತಾ ಇದೆ ಅಂತ ಸಂಸ್ಥೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ರು.

ಇನ್ನು ಶ್ರೀ ರಾಮ್ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಉಮೇಶ್ ಜಿ. ರೇವಣ್‌ಕರ್ ಮಾತನಾಡಿ, ನಮ್ಮ ಸಂಸ್ಥೆಯು ಕಳೆದ 6ವರ್ಷಗಳಿಂದ ನಿರಂತರವಾಗಿ ಇಂತಹ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಈ ಸಂಸ್ಥೆಯು ಮಹಿಳಾ ಮತ್ತು ಮಕ್ಕಳ ಸಬಲೀಕರಣಕ್ಕೆ ಪಣತೊಟ್ಟು ಮಕ್ಕಳ ವಿದ್ಯಾಭ್ಯಾಸ, ಗ್ರಾಮೀಣ ಮಹಿಳೆಯರ ಕೌಶಲ್ಯ ಅಭಿವೃದ್ಧಿಗೆ ಪ್ರೋತ್ಸಾಹಿಸುತ್ತಾ ಅವರಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದೇವೆ ಎಂದು ಶ್ರೀ ರಾಮ್ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಸಂಸ್ಥೆಯ ಬಗ್ಗೆ ಮಾಹಿತಿ ನೀಡಿದ್ರು.

ಬಳಿಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯಕವಾಗುವ ನಿಟ್ಟಿನಲ್ಲಿ ಶ್ರೀ ರಾಮ್ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಇದರ ಆಶ್ರಯದಲ್ಲಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಈ ಸಂದರ್ಭ ಶ್ರೀ ರಾಮ್ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್‌ನ ಝೋನಲ್ ಬಿಸ್‌ನೆಸ್ ಹೆಡ್ ಹಾಗೂ ಸಿಇಒ ಸುದರ್ಶನ್ ಬಿ ಹೊಳ್ಳ, ಎಸಿಪಿಗಳಾದ ಶ್ರೀನಿವಾಸ್ ಗೌಡ ಹಾಗೂ ಭಾಸ್ಕರ್ ಒಕ್ಕಲಿಗ, ಬಿಜೆಪಿ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರು, ಡಿಡಿಪಿಐ ವೈ ಶಿವರಾಮಯ್ಯ, ಎಆರ್‌ಡಿಒ ಜೆಪಿ ಗಂಗಾಧರ್, ವಕೀಲರ ಸಂಘದ ಅಧ್ಯಕ್ಷರಾದ ಎನ್ ನರಸಿಂಹ ಹೆಗ್ಡೆ, ದ.ಕ ಜಿಲ್ಲಾ ಲಾರಿ ಮಾಲಕರ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ, ಮಾಜಿ ಸಚಿವರಾದ ಕೃಷ್ಣ ಜೆ ಪಾಲೇಮಾರ್, ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಂ.ಬಿ ಪುರಾಣಿಕ್, ಮಾತಾ ಡೆವಲಪರ್‍ಸ್ ಪ್ರೈವೇಟ್ ಲಿಮಿಟೆಡ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಎನ್ ಸಂತೋಷ್ ಕುಮಾರ್ ಶೆಟ್ಟಿ, ಅರವಿಂದ ಮೋಟಾರ್‍ಸ್ ಪ್ರೈವೇಟ್ ಲಿಮಿಟೆಡ್‌ನ ಡೈರೆಕ್ಟರ್ ಎ. ಅರ್ಜುನ್ ರಾವ್, ಶ್ರೀ ರಾಮ್ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್‌ನ ಉಪಾಧ್ಯಕ್ಷರಾದ ಶರಶ್ಚಂದ್ರ ಭಟ್ ಕಾಕುಂಜೆ ಹಾಗೂ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ರು.

Related posts

Leave a Reply

Your email address will not be published. Required fields are marked *