
ಪುತ್ತೂರು: ಶ್ವಾಸಕೋಶದ ಸಮಸ್ಯೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಸಕಲೇಶಪುರದ ಅರೇಹಳ್ಳಿ ಮೂಲದ (22 ವರ್ಷ) ಸುಹನಾ ಎಂಬಾಕೆಯನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ವಿಶೇಷ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಪುತ್ತೂರು ಸಂಚಾರ ಪೋಲಿಸರು ನಗರ ವ್ಯಾಪ್ತಿಯಲ್ಲಿ ಆಂಬುಲೆನ್ಸ್ನ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಆಂಬ್ಯುಲೆನ್ಸ್ ಸಾಗಿ ಬರುವ ರಸ್ತೆಯಲ್ಲಿ ಆಯಾ ಊರಿನ ನಾಗರಿಕರು ಹಾಗೂ ಸಂಘಟನೆಗಳ ಕಾರ್ಯಕರ್ತರು ಆಂಬುಲೆನ್ಸ್ ಸುಗಮವಾಗಿ ಸಾಗಲು ಅನುವು ಮಾಡಿಕೊಟ್ಟರು.