Header Ads
Breaking News

ಸಂಘಟನೆಯ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಬಂಟ್ವಾಳ: ಪ್ರತಿಯೊಬ್ಬರೂ ತನ್ನ ಸಂಘಟನೆಯ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣದ ಅವಕಾಶ ಕಲ್ಪಿಸಿ, ಸ್ವಾವಲಂಬಿ ಬದುಕು ನೀಡಿದರೆ ಸಮಾಜಕ್ಕೆ ಕೊಡುಗೆಯಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಅನುಮತಿ ದೊರಕಿದ್ದು, ಮುಂದಿನ ಬಜೆಟ್‍ನಲ್ಲಿ ಹೆಚ್ಚಿನ ಕೊಡುಗೆಯ ನಿರೀಕ್ಷೆ ಇದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.
ಬಂಟ್ವಾಳ ತಾ. ರಾಯಿ, ಕೊೈಲ, ಅರಳ ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಕುದ್ಮಾಣಿಯಲ್ಲಿ ನೂತನ ಗುರುಮಂದಿರ, ಸಮುದಾಯ ಭವನ, ಭೋಜನಾಲಯ ನಿರ್ಮಾಣಕ್ಕೆ ನಡೆದ ಶಿಲಾನ್ಯಾಸ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭ ಕೇರಳ ಶ್ರೀಕ್ಷೇತ್ರ ಶಿವಗಿರಿ ಮಠದ ಶ್ರೀ ಸತ್ಯಾನಂದ ಸ್ವಾಮೀಜಿ, ಬಿಲ್ಲವ ಮುಖಂಡ ಹರಿಕೃಷ್ಣ, ಬಂಟ್ವಾಳ, ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ, ಬಂಟ್ವಾಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ವಾಸ್ತು ತಜ್ಞ ಪ್ರಮಲ್ ಕುಮಾರ್ ಕಾರ್ಕಳ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *