Header Ads
Breaking News

ಸಂಪತ್ ರಾಜ್ ಬಂಧನ ರಾಜಕೀಯ ಪ್ರೇರಿತ-ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಮ್ ಅಹಮ್ಮದ್ ಆರೋಪ

ಉಡುಪಿ: ಸಂಪತ್ ರಾಜ್ ಬಂಧನ ರಾಜಕೀಯ ಪ್ರೇರಿತವಾಗಿದೆ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲಿಮ್ ಅಹಮ್ಮದ್ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ಪೊಲೀಸರು ಕಾನೂನು ಪಾಲನೆ ಮಾಡಲಿ, ಪೊಲೀಸರ ತನಿಖೆಗೆ ನಮ್ಮ ಯಾವುದೇ ವಿರೋಧವಿಲ್ಲ. ಆದರೆ ತನಿಖೆ ನೆಪದಲ್ಲಿ ರಾಜಕೀಯ ಹಿತಾಸಕ್ತಿ ಸಾಧಿಸಬಾರದು. ರಾಜ್ಯದ ಬಿಜೆಪಿ ಸರಕಾರ ಕಾಂಗ್ರೆಸ್ ನಾಯಕರನ್ನು ಗುರಿ ಮಾಡುತ್ತಿದೆ ಪೊಲೀಸರಿಗಿಂತ ಮೊದಲೇ ಬಿಜೆಪಿಯ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಅವರೇನು ಪೊಲೀಸ್ ಅಧಿಕಾರಿಗಳಾ? ಲಾ ಮಿನಿಸ್ಟರ್‌ಗಳಾ ಎಂದು ಪ್ರಶ್ನಿಸಿದ ಅವರು ಡಿಜೆ ಹಳ್ಳಿ ಕೆಜಿಹಳ್ಳಿ ಪ್ರಕರಣದಲ್ಲಿ ನೂರಕ್ಕೂ ಅಧಿಕ ಜನರ ಬಂಧನವಾಗಿದೆ. ಈ ಘಟನೆ ಪೊಲೀಸ್ ಇಲಾಖೆಯ ವೈಫಲ್ಯದಿಂದ ನಡೆದಿದೆ .ಈ ಘಟನೆಗೆ ಸಂಬಂಧಿಸಿ ಸಾಕಷ್ಟು ಜನ ಅಮಾಯಕರನ್ನು ಬಂಧಿಸಲಾಗಿದೆ. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ನಮ್ಮ ನಾಯಕ. ಅವರ ಜೊತೆಗೆ ಇಡೀ ಕಾಂಗ್ರೆಸ್ ಪಕ್ಷವಿದೆ. ಅವರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದಿರುವುದು ಸರಿಯಾಗಿದೆ. ಆದರೆ ರಾಜಕೀಯ ಪ್ರೇರಿತವಾಗಿ ವಿರೋಧ ಪಕ್ಷವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವರದಿ: ಪಲ್ಲವಿ ಸಂತೋಷ್ ಉಡುಪಿ

Related posts

Leave a Reply

Your email address will not be published. Required fields are marked *