Header Ads
Breaking News

ಸಂಸದ ನಳಿನ್ ಕುಮಾರ್ ಕಟೀಲು ಟ್ವೀಟ್ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮಹಾತ್ಮ ಗಾಂಧಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನ ತಕ್ಷಣವೇ ದೇಶದಿಂದ ಗಡಿಪಾರು ಮಾಡಬೇಕೆಂದು ಮಾಜಿ ಸಚಿವ ರಮಾನಾಥ್ ರೈ ಆಗ್ರಹಿಸಿದರು. ಮಹಾತ್ಮ ಗಾಂಧಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ನಾಯಕರ ವಿರುದ್ಧ ಮಂಗಳೂರಿನ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದ್ರೂ, ಜವಾಬ್ದಾರಿಯುತ ಸ್ಥಾನದಲ್ಲಿರುವ ಇವರು ನೀಡಿರುವ ಹೇಳಿಕೆಯನ್ನ ಸಹಿಸಲು ಸಾಧ್ಯವಿಲ್ಲ, ಇಂತಹ ಹೇಳಿಕೆ ಅಕ್ಷಮ್ಯ ಅಪರಾಧವಾಗಿ ಹಾಗಾಗಿ ತಕ್ಷಣವೇ ನಳಿನ್ ಅವರನ್ನ ದೇಶದಿಂದಲೇ ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು. ಬಳಿಕ ಮಾತನಾಡಿದ ಅವರು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಬಿಜೆಪಿಗೆ ರಾಷ್ಟ್ರಪಿತ ಬಗ್ಗೆ ಗೌರವಿದ್ರೆ, ಈ ಕೂಡಲೇ ಪಕ್ಷದಿಂದ ನಳಿನ್ ಕುಮಾರ್ ಅವರನ್ನ ಉಚ್ಚಾಟಿಸಬೇಕೆಂದು ಆಗ್ರಹಿಸಿದರು.ಈ ವೇಳೆ ಮಾಜಿ ಮೇಯರ್ ಶಶಿಧರ್ ಹೆಗ್ಡೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *