Header Ads
Breaking News

ಸಚಿವ ಖಾದರ್ ವಿರುದ್ಧ ವಿಶ್ವ ಹಿಂದು ಪರಿಷತ್ ಪ್ರತಿಭಟನೆ

ಮಂಗಳೂರಿನ ಕುದ್ರೋಳಿಯಲ್ಲಿರುವ ಕಸಾಯಿಖಾನೆಗೆ15 ಕೋಟಿ ರೂಪಾಯಿ ಮಂಜೂರು ಮಾಡಲು ಹೊರಟಿರುವ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಕ್ರಮವನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್‌ನವರು ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಮಂಗಳೂರಿನ ಮಹಾನಗರ ಪಾಲಿಕೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಅವರು ಕೇಂದ್ರ ಸರ್ಕಾರದ ಹಣವನ್ನು ದುರುಪಯೋಗ ಮಾಡುತ್ತಿದ್ದಾರೆ.

ಸಚಿವ ಖಾದರ್ ಅವರು ಜಾತಿ ರಾಜಕೀಯ ಮಾಡುತ್ತಿದ್ದಾರೆ. ಸಚಿವರು ಕೂಡಲೇ ಕ್ಷಮೆ ಕೇಳಬೇಕು ಎಂದು ಆಗರಹಿಸಿದರು.ಆನಂತರ ಮಾತನಾಡಿದ ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಗೋ ರಕ್ಷಣ ಪ್ರಮುಖ್ ಶರಣ್ ಪಂಪ್‌ವೆಲ್ ಅವರು, ನಮ್ಮ ಉದ್ದೇಶ ಗೋ ಮಾತೆಯ ರಕ್ಷಣೆ. ಖಾದರ್ ಅವರೇ ನೀವು ಅಲ್ಪಸಂಖ್ಯಾತರಿಗೆ ಮಾತ್ರ ಮಂತ್ರಿಯಲ್ಲ ಜಿಲ್ಲೆಗೆ ಮಂತ್ರಿ. ಎಂದು ಹೇಳಿದರು.ಈ ಸಂದರ್ಭ ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್‌ನ ಪ್ರಮುಖರು ಹಾಜರಿದ್ದರು

Related posts

Leave a Reply