Header Ads
Header Ads
Breaking News

ಸಚಿವ ಯು.ಟಿ.ಖಾದರ್ ಅವರ ಹುಟ್ಟುಹಬ್ಬ:ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬಂಟ್ವಾಳ: ನಗರಾಭಿವೃದ್ದಿ ಖಾತೆ ಸಚಿವ ಯು.ಟಿ.ಖಾದರ್ ಅವರ ಹುಟ್ಟುಹಬ್ಬದ ನಿಮಿತ್ತ ಫರಂಗಿಪೇಟೆಯ ಟುಡೇ ಫೌಂಡೇಶನ್ ವತಿಯಿಂದ ಬಂಟ್ವಾಳದ ಸರಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಫ್. ಉಮ್ಮರ್ ಫಾರೂಕ್ ಅವರ ನೇತೃತ್ವದಲ್ಲಿ ಟುಡೇ ಫೌಂಡೇಶನ್‌ನ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭ ವಿ4 ನ್ಯೂಸ್‌ನೊಂದಿಗೆ ಮಾತನಾಡಿದ ಉಮ್ಮರ್ ಫಾರೂಕ್ ಅವರು ಎಲ್ಲಾ ಜಾತಿ, ಧರ್ಮದ ನಾಯಕನಾಗಿ ಹೊರಹೊಮ್ಮಿರುವ ಯು.ಟಿ.ಖಾದರ್ ಜಿಲ್ಲೆಗೆ ಗೌರವ ತರುವಂತಹ ಕೆಲಸವನ್ನು ಮಾಡಿದ್ದಾರೆ. ಆರೋಗ್ಯ ಇಲಾಖೆ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಇದೀಗ ವಸತಿ ಮತ್ತು ನಗರಾಭಿವೃದ್ದಿ ಇಲಾಖೆಯ ಸಚಿವರಾಗಿ ಬಡವರ ಪರ ಅನೇಕ ಅಭಿವೃದ್ದಿ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಇಂತಹ ನಾಯಕನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸುವುದರೊಂದಿಗೆ ಬಡವರ ಪರ ಕೆಲಸ ಮಾಡುವ ಶಕ್ತಿ ದೇವರು ಕರುಣಿಸಲಿ ಎಂದರು. ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಮಾಜಿ ಉಪಾಧ್ಯಕ್ಷ ಹಾಸೀರ್ ಪೇರಿಮಾರ್, ತಾ.ಪಂ.ಮಾಜಿ ಸದಸ್ಯ ಆಸೀಫ್ ಇಕ್ಬಾಲ್, ಪ್ರಮುಖರಾದ ಇಕ್ಬಾಲ್ ಸುಜೀರ್, ರಫೀಕ್ ಪೇರಿಮಾರ್, ಇಮ್ತಿಯಾಝ್ ತುಂಬೆ ಹಾಜರಿದ್ದರು.

Related posts

Leave a Reply