Header Ads
Header Ads
Breaking News

“ಸಡಕ್ ಸುರಕ್ಷಾ ಜೀವನ್ ರಕ್ಷಾ” ಶೀರ್ಷಿಕೆಯಡಿ ರಸ್ತೆ ಸುರಕ್ಷತೆ ಜಾಗೃತಿ 2019

ಬಂಟ್ವಾಳ: ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡುವವರು ತಕರಾರು ಮಾಡಿ ದಂಡ ಕಟ್ಟುವಾಗ ಯೋಚನೆ ಮಾಡುತ್ತಾರೆ. ಆದರೆ, ತಮ್ಮ ಜೀವದ ಬಗ್ಗೆ ಯಾಕೆ ಯೋಚನೆ ಮಾಡಲ್ಲ ಎಂದು ಬಂಟ್ವಾಳ ಉಪವಿಭಾಗದ ಎಎಸ್ಪಿ ಸೈದುಲು ಅಡಾವತ್ ಪ್ರಶ್ನಿಸಿದ್ದಾರೆ. ಅವರು ಬಿ.ಸಿ.ರೋಡಿನ ಕೈಕಂಬ ಜಂಕ್ಷನ್‌ನಲ್ಲಿ ಡೈಮಂಡ್ ಇಂಟರ್ ನ್ಯಾಷನಲ್ ಸ್ಕೂಲ್ ಬಿ.ಸಿ.ರೋಡ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಹಾಗೂ ಬಂಟ್ವಾಳ ಟ್ರಾಫಿಕ್ ಪೊಲೀಸ್ ಇಲಾಖೆಯ ಜಂಟಿ ಆಶ್ರಯದಲ್ಲಿ “ಸಡಕ್ ಸುರಕ್ಷಾ ಜೀವನ್ ರಕ್ಷಾ” ಶೀರ್ಷಿಕೆಯಡಿ ರಸ್ತೆ ಸುರಕ್ಷತೆ ಜಾಗೃತಿ 2019 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅವರು ರಸ್ತೆ ಸುರಕ್ಷತೆಯ ಕರಪತ್ರವನ್ನು ಬಿಡುಗಡೆಗೊಳಿಸಿದ್ರು. ಈ ಸಂದರ್ಭ ಕಾರ್ಯಕ್ರಮ ಸಂಯೋಜಕ ಗಿರೀಶ್ ಕಾಮತ್, ಡೈಮಂಡ್ ಎಜುಕೇಷನಲ್ ಟ್ರಸ್ಟ್‌ನ ಗೌರವ ಸಲಹೆಗಾರ ಹಾಜಿ ಮುಹಮ್ಮದ್ ಬಾವ, ಬಂಟ್ವಾಳ ಟ್ರಾಫಿಕ್ ಎಸ್ಸೈ ರಾಮ ನಾಯ್ಕ್, ಡೈಮಂಡ್ ಸ್ಕೂಲ್‌ನ ಕವಿತಾ ಸಾಲ್ಯಾನ್ ಉಪಸ್ಥಿತರಿದ್ದರು. 

 

Related posts

Leave a Reply

Your email address will not be published. Required fields are marked *