Header Ads
Breaking News

ಸತೀಶ್ ಜಾರಕಿಹೊಳಿಯಿಂದ ಬೆಳಪು ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ

ಅಭಿವೃದ್ಧಿಯಲ್ಲಿ ಬೆಳಪು ಗ್ರಾಮ ಪಂಚಾಯಿತಿ ರಾಜ್ಯ ರಾಷ್ಟ್ರಕ್ಕೆ ಮಾದರಿಯಾಗಿದ್ದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಕೆಲಸಗಳು ಎಲ್ಲ ಕ್ಷೇತ್ರಗಳಲ್ಲಿ ಅನುಷ್ಠಾನಕ್ಕೆ ಬರಬೇಕಿದೆ ಗ್ರಾಮ ಪಂಚಾಯಿತಿ ಹಮ್ಮಿಕೊಂಡಿರುವ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು.

ಬೆಳಪು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು ಬೆಳಪು ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದ ಅವರು ಗ್ರಾಮ ಪಂಚಾಯಿತಿಯನ್ನು ಪ್ರಶಂಸಿದರು. ಬೆಳಪು ಗ್ರಾಮ ಪಂಚಾಯತ್ ರಾಜ್ಯ ರಾಷ್ಟ್ರಕ್ಕೆ ಮಾದರಿಯಾಗುವ ರೀತಿಯಲ್ಲಿ ಕೈಗಾರಿಕಾ ಪ್ರಾರ್ಥಮಿಕ ವಿಜ್ಞಾನ ಸಂಶೋಧನಾ ಕೇಂದ್ರ ಸಾರ್ವಜನಿಕ ಹಿಂದೂ ರುದ್ರಭೂಮಿ ಸಹಿತವಾಗಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು ಕಾರ್ಯಕ್ರಮಗಳು ಎಲ್ಲೆಡೆ ಮಾದರಿಯಾಗಿದೆ ಎಂದು ಅವರು ಹೇಳಿದರು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕಾಪು ತಾಲೂಕ ಪಂಚಾಯತ್ ಉಪಾಧ್ಯಕ್ಷ ಯು.ಸಿ. ಶೇಖಬ್ಬ, ಗ್ರಾಮ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು,
ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

 

Related posts

Leave a Reply

Your email address will not be published. Required fields are marked *