Header Ads
Breaking News

ಸರಳವಾಗಿ ಶಿಕ್ಷಕರ ದಿನ ಆಚರಣೆ : ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಲೋಕೇಶ್ ಹೇಳಿಕೆ

ಶಿಕ್ಷಕರು ತಮ್ಮ ಸೇವಾವಧಿಯಲ್ಲಿ ವೃತ್ತಿ ಸೇವೆಯನ್ನು ಪರಿಗಣಿಸಿ ಸೆ.5ರಂದು ಆಚರಿಸಲಾಗುತ್ತಿರುವ ಶಿಕ್ಷಕರ ದಿನಾಚರಣೆ ಈ ಶೈಕ್ಷಣಿಕ ವರ್ಷದಲ್ಲಿ ಮಾಜಿ ರಾಷ್ಟ್ರಪತಿ ಶೋಕಾಚರಣೆ ಮತ್ತು ಕೋವಿಡ್ ನಿಯಮದಂತೆ ಸರಳವಾಗಿ ಆಚರಿಸಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್ ತಿಳಿಸಿದ್ದಾರೆ. ತಾಲೂಕಿನ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಶಿಕ್ಷಕ ದಿನಾಚರಣೆ ಆಚರಣೆ ಮಾಡಬೇಕು. ಎಸ್‍ಡಿಎಂಸಿ ಅಧ್ಯಕ್ಷರು ಮತ್ತು ಶಿಕ್ಷಕರ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿಯಮಾವಳಿಯಂತೆ ಅದರ ಚೌಕಟ್ಟಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಬೇಕಾಗಿದೆ. ಎಲ್ಲಾ ಶಿಕ್ಷಕರಿಗೂ ಶ್ರೇಷ್ಠ ಗುರು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಮತ್ತು ಶಿಕ್ಷಕರ ದಿನಾಚರಣೆಯ ಶುಭಾಶಯಗಳು ಎಂದು ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *