
ಸರಕಾರದ ತಿದ್ದು ಪಡಿಯಾದಂತೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಕೂಡ 2021, 22 ನೇ ಸಾಲಿಗೆ ನಾವು ಆಸ್ತಿ ತೆರಿಗೆಯನ್ನು ಅನುಷ್ಠಾನ ಗೊಳಿಸಲು ನಿರ್ಧರಿಸಿದ್ದೇವೆ ಎಂದು ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಹೇಳಿದರು.
ಅವರು ನಗರ ಪಂಚಾಯತ್ ಕಚೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಈ ವರ್ಷದ ದರದಲ್ಲಿ ನಾವು ಸಬ್ ರಿಜಿಸ್ಟ್ರಾರ್ ಆಫೀಸಿನ ಮೌಲ್ಯದ ಮೇಲೆ ದರವನ್ನು ನಿಗದಿ ಪಡಿಸಲಾಗುತ್ತಿದೆ. ಜನರಿಗೆ ಯಾವುದೇ ಹೆಚ್ಚುವರಿ ಹೊರೆಯಾಗದ ರೀತಿಯಲ್ಲಿ ದರವನ್ನು ನಿಗದಿ ಪಡಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರಂಜನಿ ಕುಡ್ವ, ಉಪಾಧ್ಯಕ್ಷರಾದ ಜಯಾನಂದ ಗೌಡ,ಸ್ಥಾಯಿ ಸಮಿತಿ ಅಧ್ಯಕ್ಷೆ ತುಳಸಿ ಕರುಣಾಕರ ಹಾಗೂ ಸದಸ್ಯರು ಉಪಸ್ಥಿತರಿದ್ದರು.