Header Ads
Header Ads
Header Ads
Breaking News

ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ : ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ವಿಟ್ಲ: ಸರ್ಕಾರಿ ಬಸ್ ಚಾಲಕನ ಜತೆಗೆ ಅಮಲು ಪದಾರ್ಥ ಸೇವನೆ ಮಾಡಿದ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿ ಹಲ್ಲೆಗೆ ಮುಂದಾದ ಘಟನೆ ವಿಟ್ಲ ಹಳೆ ಬಸ್ ನಿಲ್ದಾಣದಲ್ಲಿ ನಡೆದಿದ್ದು, ವಿಟ್ಲ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.ಬಾಯಾರು ನಿವಾಸಿ ಫಯಾಜ್ (28) ಬಂಧಿತ ಆರೋಪಿಯಾಗಿದ್ದಾನೆ. ಮಲ್ಲದಿಂದ ಪೆರ್ಲ ವಿಟ್ಲ ಮಾರ್ಗವಾಗಿ ಪುತ್ತೂರಿಗೆ ಹೊಗುತ್ತಿದ್ದ ಬಸ್ ವಿಟ್ಲ ಹಳೆ ಬಸ್ ನಿಲ್ದಾಣದಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸುತ್ತಿದ್ದ ಏಕಾಏಕಿ ಬಸ್ಸಿನ ಒಳಗಡೆ ನುಗ್ಗಿ ಚಾಲಕನ ಜತೆಗೆ ಅನುಚಿತವಾಗಿ ವರ್ತಿಸಿ ಹಲ್ಲೆಗೆ ಮುಂದಾಗಿದ್ದಾನೆ. ಈಬಗ್ಗೆ ಚಾಲಕ ನೀಡಿದ ದೂರಿನ ಪ್ರಕಾರ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಟ್ಲ ಪೊಲೀಸರು ಪ್ರೋಬೆಷನರಿ ಎಸ್ ಐ ವಿನೋದ್ ರೆಡ್ಡಿ ಅವರ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Related posts

Leave a Reply

Your email address will not be published. Required fields are marked *