Header Ads
Header Ads
Breaking News

ಸಸಿಹಿತ್ಲು ಕಡಲ ಕಿನಾರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಮಹಾ ನಗರ ಪಾಲಿಕೆ, ಒಎನ್‌ಜಿಸಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಸಿಹಿತ್ಲು ಬೀಚ್ ಕಡಲ ಕಿನಾರೆಯಲ್ಲಿ ಬೀಚ್ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.ಕಡಲ ಕಿನಾರೆಯನನ್ನು ಸ್ವಚ್ಚಗೊಳಿಸುವ ಉದ್ದೇಶದಿಂದ ಬೀಚ್‌ನಲ್ಲಿದ್ದ ಕಸ, ಕಡ್ಡಿ, ಪ್ಲಾಸ್ಟಿಕ್‌ಗಳನನು ಹೆಕ್ಕಿ ಸ್ವಚ್ಚಗೊಳಿಸು ಕಾರ್ಯಕ್ರಮಕ್ಕೆ ವಿವಿಧ ಸಂಘ ಸಂಸ್ಥೆಗಳ ಕೈಜೋಡಿಸಿವೆ. ಇವರ ಜೊತೆಯಲ್ಲಿ ಶಿಕ್ಷಣ ಸಂಸ್ಥೆಗಳವರು ಕೂಡ ಸಾಥ್ ನೀಡಿದ್ದಾರೆ. ವಿದ್ಯಾರ್ಥಿಗಳು ಬೀಚ್‌ನಲ್ಲಿರುವ ಪ್ಲಾಸ್ಟಿಕ್‌ನಂತಹ ತ್ಯಾಜ್ಯಗಳನ್ನು ಸಂಗ್ರಹಿಸಿ, ಬೀಚ್ ಅನ್ನು ಸ್ವಚ್ಚಗೊಳಿಸಿದರು. ಇದೇ ವೇಳೆ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ಈ ಸಂದರ್ಭ ಪಣಂಬೂರು ಬೀಚ್ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಮುಖ್ಯಸ್ಥ ಯತೀಶ್ ಬೈಕಂಪಾಡಿ, ಜಯಪ್ರಕಾಶ್, ದಿನೇಶ್, ಮಹೇಶ್ ಕುಮಾರ್, ಗೋವಿಂದ ದಾಸ ಕಾಲೇಜು ವಿದ್ಯಾರ್ಥಿಗಳು, ಶ್ರೀನಿವಾಸ ದಂತ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಮತ್ತಿತರು ಉಪಸ್ಥಿತರಿದ್ದರು.

   

Related posts

Leave a Reply