Header Ads
Header Ads
Breaking News

ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಪದಗಳಿಂದ ನಿಂದನೆ :ಕಿಡಿಗೇಡಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಬಿಜೆಪಿ ನಿರ್ಧಾರ

ಮೂಡುಬಿದಿರೆ : ಬರುತ್ತಿರುವ ಚುನಾವಣೆಯನ್ನು ಎದುರಿಸಲು ಮೂಡುಬಿದಿರೆಯ ಕಾರ್ಯಕರ್ತರು ಸರ್ವ ರೀತಿಯಲ್ಲಿ ಸಜ್ಜಾಗಿದ್ದಾರೆ. ಈ ನಡುವೆ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನಮ್ಮ ಪಕ್ಷದ ಮುಖಂಡರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಇನ್ನು ಮುಂದೆ ಇದು ಪುನಾರಾವರ್ತನೆಯಾದರೆ ಅಂತಹ ಕಿಡಿಗೇಡಿಗಳ ವಿರುದ್ಧ ಶಿಸ್ತು ಕ್ರಮ ಹಾಗೂ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಈಶ್ವರ್ ಕಟೀಲ್ ಹೇಳಿದರು.

ಅವರ ಬಿಜೆಪಿ ಕಛೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದರು. ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರು ಮೂಉಬಿದಿರೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಸಂಕಲ್ಪ ಮಾಡಿದ್ದಾರೆ. ನರೇಂದ್ರ ಮೋದಿಯವರ ಸಾಧನೆ ಹಾಗೂ ರಾಜ್ಯ ಸರಕಾರದ ವೈಫಲ್ಯವನ್ನು ಇಟ್ಟುಕೊಂಡು ನಾವು ಚುನಾವಣೆಯನ್ನು ಎದುರಿಸುತ್ತಿದ್ದೇವೆ.

ಇಷ್ಟರವರೆಗೆ ಮೂಡುಬಿದಿರೆ ಕ್ಷೇತ್ರಕ್ಕೆ ಬಿಜೆಪಿಯ ಅಭ್ಯರ್ಥಿ ಘೋಷಣೆಯಾಗಿಲ್ಲ. ಆದ್ದರಿಂದ ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಬೇಡ. ಇಂದು ಪಕ್ಷ ಗಟ್ಟಿಯಾಗಿರುವುದರಿಂದ ಸಹಜವಾಗಿ ಸ್ಪರ್ಧಿಸುವ ಆಕಾಂಕ್ಷಿಗಳ ಪಟ್ಟಿ ದೊಡ್ಡದಿರಬಹುದು. ಆದರೆ ಪಕ್ಷ ಯಾವುದೇ ಅಭ್ಯರ್ಥಿಯನ್ನು ಸೂಚಿಸಿದರೂ ನಾವೆಲ್ಲರೂ ಒಂದಾಗಿ ಮೂಡುಬಿದಿರೆಯನ್ನು ಕಾಂಗ್ರೆಸ್ ಮುಕ್ತ ಮಾಡಿ, ಬಿಜೆಪಿಯ ಶಾಸಕನನ್ನು ಆಯ್ಕೆ ಮಾಡಿ ಯಡ್ಡಿಯೂರಪ್ಪ ಅವರ ಕೈಯನ್ನು ಬಲಪಡಿಸುತ್ತೇವೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಪಿ ಜಗದೀಶ ಅಧಿಕಾರಿ, ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಎಂ, ಉಮಾನಾಥ ಕೋಟ್ಯಾನ್, ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಚಾವಡಿಮನೆ ಜಗನ್ನಾಥ ಶೆಟ್ಟಿ, ಸುಕೇಶ್ ಶೆಟ್ಟಿ ಶಿರ್ತಾಡಿ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.