

ವಿಟ್ಲ: ವಿಟ್ಲ ಸಮೀಪದ ಕರೋಪಾಡಿ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.ಬಂಟ್ವಾಳ ತಾಲೂಕಿನ ಗಡಿ ಭಾಗವಾಗಿರುವ ಕರೋಪಾಡಿ ಗ್ರಾಮದ ಸಾರ್ಥಕೋಡಿ ಎಂಬಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ.
ಚಂದಪ್ಪ ಮೂಲ್ಯ ಮೃತಪಟ್ಟವರು. ರಾತ್ರಿಯ ಬಳಿಕ ಗುಡುಗು ಸಿಡಿಲು ಇತ್ತು. ಈ ಸಂದರ್ಭ ಮನೆಗೆ ಸಿಡಿಲು ಬಡಿದಿದೆ, ಸುಮಾರು 12.30ರ ಬಳಿಕ ಘಟನೆ ನಡೆದಿದ್ದು, ಚಂದಪ್ಪ ಮೂಲ್ಯ ಅವರು ಸಿಡಿಲಾಘಾತದಿಂದ ತೀವ್ರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇದೇ ಸಂದರ್ಭ ಮನೆಗೂ ಸಿಡಿಲಾಘಾತದಿಂದ ಹಾನಿಗಳುಂಟಾಗಿವೆ. ವಿದ್ಯುತ್ ಉಪಕರಣಗಳು ಸುಟ್ಟುಹೋಗಿವೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು, ಪೋಲಿಸ್ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.