Header Ads
Breaking News

ಸುಳ್ಯದಲ್ಲಿ ಎರಡು ಪ್ರತ್ಯೇಕ ಅಪಘಾತ : ಘಟನೆಯಲ್ಲಿ ಇಬ್ಬರು ಸಾವು

ಸುಳ್ಯದ ಬೈತಡ್ಕ ಮತ್ತು ಗೊಂಟಡ್ಕ ಬಳಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮಂಗಳೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ತಡೆಬೇಲಿಗೆ ಡಿಕ್ಕಿ ಹೊಡೆದು ಪಲ್ಟಿಯಾಯಿತು. ಪರಿಣಾಮ ಮರ್ಕಂಜ ಗ್ರಾಮದ ಮಾವಜಿ ಕೇಶವ ಗೌಡರ ಪುತ್ರ ಹರೀಶ್(43) ಕಾರಿನಿಂದ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುಳ್ಯದ ದುಗ್ಗಲಡ್ಕ ಸಮೀಪದ ಗೊಂಟಡ್ಕದಲ್ಲಿ ನಡೆದ ಇನ್ನೊಂದು ಅಪಘಾತದಲ್ಲಿ ಜೀಪು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.

ಮರ್ಕಂಜದಿಂದ ಸುಳ್ಯ ಕಡೆಗೆ ಬರುತ್ತಿದ್ದ ಜೀಪು ಮತ್ತು ದುಗಲಡ್ಕ ಕಡೆಗೆ ಹೋಗುತ್ತಿದ್ದ ಬೈಕ್ ಗೋಂಟಡ್ಕದಲ್ಲಿ ಡಿಕ್ಕಿ ಹೊಡೆಯಿತು. ಪರಿಣಾಮ ಬೈಕ್ ಚಾಲಕ ರಸ್ತೆಗೆ ಎಸೆಯಲ್ಲಟ್ಟು, ತಲೆಗೆ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಬೈಕ್ ಜೀಪಿನ ಅಡಿಭಾಗದಲ್ಲಿ ಸಿಲುಕಿಕೊಂಡಿದೆ. ಮೃತ ಅಜ್ಜಾವರದ ರಾಜಕುಮಾರ್(40) ಎಂದು ಗುರುತಿಸಲಾಗಿದೆ. ಈತ ವಿದ್ಯುತ್ ಬಿಲ್ಲುವಿತರಕರಾಗಿದ್ದ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

Leave a Reply

Your email address will not be published. Required fields are marked *