Header Ads
Header Ads
Breaking News

ಸೂರಿಕುಮೇರು ಹಾಗೂ ಕುದ್ರೆಬೆಟ್ಟುವನಲ್ಲಿ ಖಾಸಗಿ ಬಸ್‌ಗಳ ಮೇಲೆ ಕಲ್ಲು ತೂರಾಟ

ಮಂಗಳೂರು ಕಡೆಯಿಂದ ಮಾಣಿ ಮೂಲಕ ಪುತ್ತೂರು ತೆರಳುವ ಸೆಲಿನಾ ಮತ್ತು ಸೇಫ್ವೇ ಸೇರಿದಂತೆ ಮೂರು ಖಾಸಗಿ ಬಸ್‌ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಸೂರಿಕುಮೇರ್, ಹಾಗೂ ಬಂಟ್ವಾಳ ಠಾಣಾ ವ್ಯಾಪ್ತಿಯ ಕುದ್ರೆಬೆಟ್ಟುನಲ್ಲಿ ನಡೆದಿದೆ.

ಘಟನೆಯಲ್ಲಿ ಬಸ್‌ಗಳ ಗಾಜು ಸಂಪೂರ್ಣ ಧ್ವಂಸಗೊಂಡಿದೆ.. ಸೋಮವಾರ ಕೇರಳ ಭಾಗದ ಅಡ್ಯನಡ್ಕದಲ್ಲಿ ಗೋ ಸಾಗಾಟಗಾರರ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಪಿಕಪ್ ವಾಹನ ದರೋಡೆ ಮಾಡಿದ್ದಾರೆ ಎಂದು ಆರೋಪಿಸಿ ವಿಟ್ಲ ಪ್ರಖಂಡದ ಭಜರಂಗ ದಳದ ಮುಖಂಡ ಅಕ್ಷಯ್ ರಜಪೂತ್ ಸೇರಿದಂತೆ ಹಲವು ಮಂದಿ ಮೇಲೆ ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ.

Related posts

Leave a Reply

Your email address will not be published. Required fields are marked *