Header Ads
Breaking News

ಸೋಮಾವತಿ ನದಿಯ ಕಿಂಡಿ ಅಣೆಕಟ್ಟಿನ ಶುಚಿತ್ವ ಕಾರ್ಯ : ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದಿಂದ ನಡೆದ ಶುಚಿತ್ವ

ಶ್ರೀ ಕ್ಷೇತ್ರ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದಿಂದ ಬೆಳ್ತಂಗಡಿ ಸೋಮಾವತಿ ನದಿಯ ಕಿಂಡಿ ಅಣೆಕಟ್ಟಿನ ಶುಚಿತ್ವ ಕಾರ್ಯಾಚರಣೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯಲ್.ಎಚ್ ಮಂಜುನಾಥ್, ಧರ್ಮಸ್ಥಳ ವಿಪತ್ತು ನಿರ್ವಹಣಾ ಪಡೆಯ ಎನ್‍ಡಿಆರ್‍ಎಫ್ ಮೂಲಕ ತರಬೇತಿ ಹೊಂದಿದ ಸ್ವಯಂ ಸೇವಕರು ಬಹಳ ಉತ್ಸಾಹದಿಂದ ಒಗ್ಗಟ್ಟಾಗಿ ಸಮಾಜದ ಹಲವಾರು ಪ್ರಕಾರಗಳ ಸಮಸ್ಯೆಗೆ ಸ್ಪಂದಿಸುತಿದ್ದಾರೆ. ಅದರಲ್ಲೂ ಯಾವುದೇ ಪ್ರತಿ ಫಲಾಪೇಕ್ಷೆ ಇಲ್ಲದೆ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ದಿಯ# ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *